ಕಲಬುರಗಿ ಸರ್ಕಾರಿ ಬಾಲಮಂದಿರದಲ್ಲಿ ಗುರುವಾರ ನಡೆದ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿವಿಧ ಭಾಗಿದಾರರ ಇಲಾಖೆಯ ಅಧಿಕಾರಿ, ಸಿಬ್ಬಂದಿ ತರಬೇತಿ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಮಾತನಾಡಿದರು. ಬೃಂದ ಅಡಿಗೆ, ಲಕ್ಷ$್ಮಣ ಶೃಂಗೇರಿ, ರಾಜಕುಮಾರ ರಾಠೋಡ, ಮಂಜುಳಾ ಪಾಟೀಲ್, ಶ್ರೀನಿವಾಸ ಬಾಳವಾಲೆ, ಶಿವನಂದಮ್ಮ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿಕೆ
ಸರ್ಕಾರಿ ಬಾಲಮಂದಿರದಲ್ಲಿ ಕಾರ್ಯಾಗಾರ
ಕಲಬುರಗಿ: ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯು ಗಂಭೀರ ಅಪರಾಧವಾಗಿದ್ದು, ಇದನ್ನು ತಡೆಗಟ್ಟಲು ವಿವಿಧ ಇಲಾಖೆಗಳ ನಡುವೆ ಸಮನ್ವಯ ಬಲಪಡಿಸುವುದು, ಅಧಿಕಾರಿ ಮತ್ತು ಸಿಬ್ಬಂದಿಗೆ ಮಹಿಳೆಯರಿಗೆ ಸಂಬಂಧಿತ ಕಾಯ್ದೆಗಳು ಮತ್ತು ನಿಯಮಾವಳಿಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಹಮ್ಮಿಕೊಳ್ಳುವುದು ಅವಶ್ಯಕ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಟಕದ ಸಹಯೋಗದಲ್ಲಿ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿವಿಧ ಭಾಗಿದಾರರ ಇಲಾಖೆಯ ಅಧಿಕಾರಿ/ ಸಿಬ್ಬಂದಿಗೆ ಕಲಬುರಗಿಯ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಭಾಗದ ೇತ್ರ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿ ಹಾಗೂ ಸಿಬ್ಬಂದಿ ತರಬೇತಿ ಪಡೆದು ನೊಂದ ಮಹಿಳೆ ಮತ್ತು ಮಕ್ಕಳಿಗೆ ರಕ್ಷಣೆ ನೀಡಲು ಹಾಗೂ ತಪ್ಪಿತಸ್ಥರಿಗೆ ಶಿೆ ಕೊಡಿಸಬೇಕು. ಈ ತರಬೇತಿಯ ಸದುಪಯೋಗ ಪಡೆದು ಈ ೇತ್ರದಲ್ಲಿ ಕೆಲಸ ಮಾಡುವ ಸ್ವಯಂ ಸೇವಾ ಸಂಸ್ಥೆಗಳ ಸಮನ್ವಯದೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಬೆಂಗಳೂರು ಗ್ಲೋಬಲ್ ಇಂಡಿಯಾ ನಿರ್ದೇಶಕ ಬೃಂದ ಅಡಿಗೆ ಮಾತನಾಡಿ, ತರಬೇತುದಾರರಿಗೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಯಾವ ರೀತಿ ಮಾಡಲಾಗುತ್ತದೆ. ಕೆಲಸದ ಸ್ಥಳಗಳಲ್ಲಿ ಯಾವ ರೀತಿ ಲೈಂಗಿಕ ಕಿರುಕುಳ ನಡೆಯುತ್ತದೆ ಎಂಬುದರ ಕುರಿತು ವಿವರಿಸಿ, ಸೈಬರ್ ಅಪರಾಧಿಗಳು ಮಹಿಳೆ ಮತ್ತು ಮಕ್ಕಳನ್ನು ದೂರವಾಣಿ ಕರೆ ಮೂಲಕ ಯಾವ ರೀತಿ ಬಲಿಪಶು ಮಾಡುತ್ತಾರೆ, ಈ ಸಂದರ್ಭದಲ್ಲಿ ಕಾಯ್ದೆ ಏನು ಹೇಳುತ್ತದೆ ಎಂಬುದರ ಕುರಿತು ವಿವರಿಸಿದರು.
ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ$್ಮಣ ಶೃಂಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಕಲಬುರಗಿ(ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳವಾಲೆ, ಬಾಲಕಿಯರ ಸರ್ಕಾರಿ ಬಾಲ ಮಂದಿರದ ಅಧೀಕ್ಷಕಿ ಶಿವನಂದಮ್ಮ, ಕಲಬುರಗಿ (ನಗರ) ಸಂರಕ್ಷಣಾಧಿಕಾರಿ ಅಂಬಿಕಾ ಓಗಿ ಇತರರಿದ್ದರು.
ಜಿಲ್ಲಾ ಮಹಿಳಾ ಸಬಲೀಕರಣ ಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಿಷನ್ಶಕ್ತಿ ಸಂಯೋಜಕಿ ವಿಜಯಲಕ್ಷೊ$್ಮ ನಿರೂಪಿಸಿ, ವಂದಿಸಿದರು.
ತರಬೇತಿ ಪಡೆದ ತರಬೇತುದಾರರು ಸಾಗಾಣಿಕೆಗೆ ಒಳಗಾದ ಮಹಿಳೆ ಹಾಗೂ ಮಕ್ಕಳನ್ನು ರಸಬೇಕು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ದೂರು ನೀಡಬೇಕು.