ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ

ಮಾಗಡಿಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಗುಂಪು ಆಟಗಳ ಕ್ರೀಡಾಕೂಟಕ್ಕೆ ಬಮುಲ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು. ಪುರಸಭೆ ಮಾಜಿ ಅಧ್ಯಕ್ಷ ಎಚ್.ಜೆ.ಪುರುಷೋತ್ತಮ್,  ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಕೆಇಬಿ ರಾಮಕೃಷ್ಣಪ್ಪ, ಇನ್‌ಸ್ಪೆಕ್ಟರ್ ಶ್ರೀನಿವಾಸ್ ಇತರರಿದ್ದರು.
ಮಾಗಡಿಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಗುಂಪು ಆಟಗಳ ಕ್ರೀಡಾಕೂಟಕ್ಕೆ ಬಮುಲ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು. ಪುರಸಭೆ ಮಾಜಿ ಅಧ್ಯಕ್ಷ ಎಚ್.ಜೆ.ಪುರುಷೋತ್ತಮ್, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಕೆಇಬಿ ರಾಮಕೃಷ್ಣಪ್ಪ, ಇನ್‌ಸ್ಪೆಕ್ಟರ್ ಶ್ರೀನಿವಾಸ್ ಇತರರಿದ್ದರು.
Published on

ಮಾಗಡಿ :

ವಿದ್ಯಾರ್ಥಿಗಳಲ್ಲಿ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಬಮುಲ್ ನಿರ್ದೇಶಕ ಎಚ್.ಎನ್. ಅಶೋಕ್ ತಿಳಿಸಿದರು.

ಬಿಜಿಎಸ್ ಕಾಲೇಜು ಆವರಣದಲ್ಲಿ ಬುಧವಾರ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ತಾಲೂಕು ಮಟ್ಟದ ಗುಂಪು ಆಟಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಸಾಲು ಸಾಲು ಕ್ರೀಡಾಕೂಟಗಳು ನಡೆದರೂ ಒಲಿಂಪಿಕ್ಸ್‌ನಲ್ಲಿ ನಿರೀಕ್ಷಿತ ಸಾಧನೆ ಸಾಧ್ಯವಾಗುತ್ತಿಲ್ಲ.
ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಮನಹರಿಸಬೇಕು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ವಿಶೇಷ ಕ್ರೀಡಾ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕ್ರೀಡೆಗಳಿಗೆ ಹೆಚ್ಚು ಒತ್ತುನೀಡಬೇಕು. ಇದರಿಂದ ವಿದ್ಯಾರ್ಥಿಗಳು ಒಲಂಫಿಕ್ಸ್‌ನಲ್ಲಿ ಹೆಚ್ಚೆಚ್ಚು ಚಿನ್ನದ ಪದಕಗಳಿಸಲು ಸಾಧ್ಯ ಎಂದು ಒತ್ತಾಯಿಸಿದರು.
ಪೋಲಿಯೋ ಪೀಡಿತರಾಗಿದ್ದರೂ ಬಡತನವನ್ನು ಮೆಟ್ಟಿ ನಿಂತು ಒಲಿಂಪಿಕ್ಸ್‌ನಲ್ಲಿ 3 ಚಿನ್ನದ ಪದಕ ಗೆದ್ದ ಅಮೆರಿಕದ ಅಥ್ಲೇಟ್ ವಿಲ್ಮಾ ರುಡಾಲ್ಫ್ ಅವರ ಸಾಧನೆಯನ್ನು ಸ್ಮರಿಸಿದ ನಿರ್ದೇಶಕರು, ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ ಸಾಧನೆ ಮಾಡುವಂತೆ ಕರೆ ನೀಡಿದರು.
ಪುರಸಭೆ ಮಾಜಿ ಅಧ್ಯಕ್ಷ ಎಚ್.ಜೆ.ಪುರುಷೋತ್ತಮ್ ಮಾತನಾಡಿ, ಕ್ರೀಡಾ ಸ್ಫೂರ್ತಿಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ. ಕ್ರೀಡೆಗಳು ಕೇವಲ ಗೆಲುವು-ಸೋಲಿಗೆ ಸೀಮಿತವಾಗಿರದೆ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಆದ್ಯತೆ ನೀಡಬೇಕು. ಶಿಸ್ತು, ಸಂಯಮ ಮತ್ತು ಸೌಹಾರ್ದತೆಯನ್ನು ಕಲಿಸುವ ಶಕ್ತಿ ಕ್ರೀಡೆಗಿದೆ.
ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಕ್ಕಾಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧಿಸಲು ಸಾಧ್ಯ. ಕ್ರೀಡಾಪಟುಗಳು ಉನ್ನತ ಮಟ್ಟಕ್ಕೆ ಬೆಳೆದು ತಾಲೂಕಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.
ಪ್ರಾಂಶುಪಾಲ ಉಮೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಶ್, ವೆಂಕಟೇಶ್, ರಮೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net