ಫಲ-ಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

Fruit and Flower
Fruit and Flower
Published on
ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಶರಣಬಸವೇಶ್ವರ ಕೆರೆ ನಿರ್ವಹಣಾ ಪ್ರಾಧಿಕಾರ ಹಾಗೂ ತೋಟಗಾರಿಕೆ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 22 ರಂದು ರವಿವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಫಲಫುಷ್ಪ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಫಲಫುಷ್ಪ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಬೆಂಗಳೂರು (ಇ-ಆಡಳಿತ) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್‍ಕುಮಾರ್ ಪಾಂಡೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್. ಗಿರೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಂಬ್ರಾಹಿಂ ಮೈಗೂರ ಹಾಗೂ ಬೆಂಗಳೂರು ಲಾಲಬಾಗ (ತರಿಕಾರಿಗಳು) ಜಂಟಿ ನಿರ್ದೇಶಕ ಧನರಾಜ್ ಕೆ. ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net