ಗಿರಿಜಿಲ್ಲೆ ಬರಪೀಡಿತ ಪಟ್ಟಿಗೆ ಸೇರಿಸಿ

ಗಿರಿ ಜಿಲ್ಲೆಯನ್ನು ಬರಪೀಡಿತ ಘೋಷಣೆ ಮಾಡುವಂತೆ ಆಗ್ರಹಿಸಿ ಯಾದಗಿರಿ ತಹಸಿಲ್ ಕಚೇರಿ ಎದುರು ಗುರುವಾರ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಸಿದ್ದುನಾಯಕ ಹತ್ತಿಕುಣಿ, ನಿಂಗಪ್ಪ ಗುಡಗುಡಿ, ವಿಶ್ವರಾಜ ಪಾಟೀಲï, ಸಿದ್ದಪ್ಪ ಕೂಯಿಲೂರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಅಶೋಕ ನಾಯಕ, ಸುಭಾಷ ಯರಗೋಳ, ವೆಂಕಟರಾಮುಲು ಸೈದಾಪೂರ, ಸುರೇಶ ಬೆಳಗುಂದಿ, ಜರ್ನಾಧನ ಬಡಿಗೇರಾ ಇತರರಿದ್ದರು.
ಗಿರಿ ಜಿಲ್ಲೆಯನ್ನು ಬರಪೀಡಿತ ಘೋಷಣೆ ಮಾಡುವಂತೆ ಆಗ್ರಹಿಸಿ ಯಾದಗಿರಿ ತಹಸಿಲ್ ಕಚೇರಿ ಎದುರು ಗುರುವಾರ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಸಿದ್ದುನಾಯಕ ಹತ್ತಿಕುಣಿ, ನಿಂಗಪ್ಪ ಗುಡಗುಡಿ, ವಿಶ್ವರಾಜ ಪಾಟೀಲï, ಸಿದ್ದಪ್ಪ ಕೂಯಿಲೂರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಅಶೋಕ ನಾಯಕ, ಸುಭಾಷ ಯರಗೋಳ, ವೆಂಕಟರಾಮುಲು ಸೈದಾಪೂರ, ಸುರೇಶ ಬೆಳಗುಂದಿ, ಜರ್ನಾಧನ ಬಡಿಗೇರಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ, ತಾಲೂಕು ಘಟಕ ಒತ್ತಾಯ
  • ಆರು ತಾಲೂಕುಗಳಲ್ಲಿ ಬೀದಿಗಿಳಿದ ಕರವೇ ಕಾರ್ಯಕರ್ತರು
ಯಾದಗಿರಿ: ಮಳೆ ಇಲ್ಲದೆ ಬಿತ್ತಿದ ಬೆಳೆ ಒಣಗಿದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಕೂಡಲೇ ಸೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು ಗುರುವಾರ ಜಿಲ್ಲೆಯ ಆರು ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಇಡೀ ಜಿಲ್ಲೆಯಲ್ಲಿ ಮಳೆ ಬಾರದೆ ಒಣಬರಗಾಲದ ಛಾಯೆ ಆವರಿಸಿದ್ದರೂ ಕೇವಲ ಶಹಾಪುರ ತಾಲೂಕು ಒಂದೇ ಬಡಪೀಡಿತ ಘೋಷಣೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ ಪದಾಧಿಕಾರಿಗಳು, ಆಗಿರುವ ತಪ್ಪನ್ನು ತಿದ್ದಿಕೊಂಡು ಇಡೀ ಜಿಲ್ಲೆ ಬರಗಾಲ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಮುಂಗಾರಿನ ಪ್ರಮುಖ ಬೆಳೆಗಳಾದ ಹೆಸರು, ಉದ್ದು, ಶೇಂಗಾ, ತೊಗರಿ ಬೀಜಗಳನ್ನು ಬಿತ್ತಿದಾಗ ಸಕಾಲಕ್ಕೆ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿವೆ. ಸಾಲ ಮಾಡಿದ ಬಿತ್ತನೆ ಮಾಡಿದ ರೈತರು ಇಂದು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. ಕಾರಣ ಸರ್ಕಾರ ಕುಂಟು ನೆಪ ಹೇಳದೇ ಕೂಡಲೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ಎಕರೆಗೆ ೫೦ ಸಾವಿರ ರೂ. ಪರಿಹಾರ ನೀಡಬೇಕೆಂದು ಆರು ತಾಲೂಕುಗಳಲ್ಲಿ ತಹಸಿಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿಪತ್ರ ಸಲ್ಲಿಸಿದರು.
ಯಾದಗಿರಿ ತಹಸಿಲ್ದಾರ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಪದಾಧಿಕಾರಿಗಳಾದ ಸಿದ್ದುನಾಯಕ ಹತ್ತಿಕುಣಿ, ನಿಂಗಪ್ಪ ಗುಡಗುಡಿ, ವಿಶ್ವರಾಜ ಪಾಟೀಲ್, ಸಿದ್ದಪ್ಪ ಕೂಯಿಲೂರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಅಶೋಕ ನಾಯಕ, ಸುಭಾಷ ಯರಗೋಳ, ವೆಂಕಟರಾಮುಲು ಸೈದಾಪೂರ, ಸುರೇಶ ಬೆಳಗುಂದಿ, ಜರ್ನಾಧನ ಬಡಿಗೇರಾ, ಮಹೇಶ ಠಾಣಗುಂದಿ, ಸೈದಪ್ಪ ಬಾಂಬೆ, ನಾಗಪ್ಪ ಗೋಪಾಳಪೂರ, ಸಾಗರ, ಬಸ್ಸು ಸೈದಾಪೂರ, ಅನೀಲ ದಾಸನಕೇರಿ, ವಿಜಯಕುಮಾರ ರಾಠೋಡ, ಸಾಬು ನೀಲಹಳ್ಳಿ, ನಾಗೇಂದ್ರ ಕೂಡ್ಲೂರ, ರವಿ ಜಮ್ಮಾರ್, ನಾಗು ತಾಂಡೂರಕರ್, ಭಿಮರಾಯ ಗೌಡಗೇರಾ, ಲಿಂಗಾರೆಡ್ಡಿ ವಡವಟ್, ಸಿದ್ದು ಸಾಹುಕಾರ ಠಾಣಗುಂದಿ, ರಮೇಶ.ಡಿ.ನಾಯಕ ಇತರರಿದ್ದರು. ನಂತರ ತಹಸಿಲ್ದಾರ ಸುರೇಶ ಅಂಕಲಗಿ ಅವರಿಗೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಮನವಿ ಸಲ್ಲಿಸಿದರು.
"

ಮಳೆ ಇಲ್ಲದೆ ಜಿಲ್ಲೆಯಲ್ಲಿ ರೈತರು ಬಿತ್ತಿದ್ದ ಬೆಳೆ ಶೇ.೧೦೦ ನಷ್ಟವಾಗಿದ್ದು, ಅಂತರ್ಜಲ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಭಾಗದ ರೈತರು, ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೇ ಹೊಟ್ಟೆ ಪಾಡಿಗಾಗಿ ದಿನನಿತ್ಯ ಸಾವಿರಾರು ಜನರು ವಲಸೆ ಹೋಗುತ್ತಿದ್ದಾರೆ. ಇಷ್ಟೆಲ್ಲ ವಾಸ್ತವ ಸ್ಥಿತಿ ಇದ್ದರೂ ಬರ ಘೋಷಣೆಯಲ್ಲಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ನಿರ್ಲಕ್ಷ್ಯ ವಹಿಸದೆ ಬರ ಘೋಷಣೆ ಮಾಡಬೇಕು ಇಲ್ಲದಿದ್ದರೆ ಸೆ.೧೫ರಂದು ರಾಷ್ಟ್ರಿಯಾ ಹೆದ್ದಾರಿ ಬಂದ್ ಮಾಡಲಾಗವುದು.| ಟಿ.ಎನ್.ಭೀಮುನಾಯಕ ಜಿಲ್ಲಾಧ್ಯಕ್ಷ ಕರವೇ ಯಾದಗಿರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net