ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ! ಬರದ ಪರಿಸ್ಥಿತಿ ಮಧ್ಯೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ? Karnataka Rains

ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ವರುಣನ ಅಬ್ಬರ ಜೋರಾಗಿದೆ.
Karnataka Rains
ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ! ಬರದ ಪರಿಸ್ಥಿತಿ ಮಧ್ಯೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ? Karnataka Rains
Published on: 

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ (Karnataka Rains) ಕಣ್ಮರೆಯಾಗುತ್ತಿರುವ ನಡುವೆಯೇ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆಗಳು ಕಂಡುಬಂದಿದ್ದು, ಬಂಗಾಳಕೊಲ್ಲಿಯ ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಈಗಾಗಲೇ ತಗ್ಗಿದೆ. ಆದರೆ, ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ವರುಣನ ಅಬ್ಬರ ಜೋರಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗಲು ವೇಳೆ ಬಿಸಿಲು ಮತ್ತು ಸೆಕೆಯ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವದ ಗಾಳಿಯ ಪ್ರಭಾವ ಹೆಚ್ಚಾದರೆ ಕೆಲವೆಡೆ ತುಂತುರು ಮಳೆಯೂ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ.29, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದು ಹಾಸನ, ಮೈಸೂರು, ​ಚಿಕ್ಕಮಗಳೂರು, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಸೇರಿ ಒಟ್ಟು ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಗಳ ಬೆನ್ನಲ್ಲೇ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ವರದಿ ಪ್ರಕಾರ, ಕರಾವಳಿ ಭಾಗದಲ್ಲಿ ಮುಂದಿನ 10 ದಿನಗಳವರೆಗೆ ಮಳೆಯ ವಾತಾವರಣ ಹೀಗೆ ಮುಂದುವರಿಯುವ ಸಾಧ್ಯತೆಯಿದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆಗಳಿವೆ.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಸೆ.29ರಂದು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Also Read
ನಾಯಿಗಳಿಗೂ ಮಾತು ಗುರುತಿಸುವ ಸಾಮರ್ಥ್ಯ! ಇಲ್ಲಿದೆ ನೋಡಿ ನಿಮ್ಮ ಹುಬ್ಬೇರಿಸುವ ವರದಿ | Dogs
Karnataka Rains

ದಕ್ಷಿಣ ಒಳನಾಡಿನಲ್ಲಿ ಅ.6ರ ತನಕ ಮಳೆ?

ಮಲೆನಾಡು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಆಕ್ಟೋಬರ್​ 6 ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಒಟ್ಟಿನಲ್ಲಿ, ಮುಂಗಾರು ಹಿಂತಿರುಗುವ ಹಂತದಲ್ಲಿದ್ದರೂ ತೇವಾಂಶಭರಿತ ಗಾಳಿಯ ಪ್ರಭಾವದಿಂದ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಇನ್ನೂ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net