ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಡಾ.ಅಶೋಕ್, ಬಿ.ಎಸ್.ಸತೀಶ್, ಎಸ್.ಆರ್.ಲೋಕೇಶ್, ಕೆ.ರವೀಶ್, ಲಿಂಗರಾಜು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ
ಇಜ್ಜಲಘಟ್ಟ ಗ್ರಾಮ
ನಾಗಮಂಗಲ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಸಾಮಾನ್ಯ ಜ್ಞಾನ, ಉತ್ತಮ ಸಂಸ್ಕಾರ, ಕ್ರೀಡಾಸಕ್ತಿ ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಇಜ್ಜಲಘಟ್ಟ ಗ್ರಾಮದಲ್ಲಿ ವಿವೇಕ ಯೋಜನೆಯಡಿ 13.90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯೆ ಕಲಿಯುವ ಮಕ್ಕಳಿಗೆ ಉತ್ತಮ ಭವಿಷ್ಯವಿದೆ ಎಂದರು.
ಗ್ರಾಮೀಣ ಮಕ್ಕಳು ದೇಶದ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕೆಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಪಠ್ಯಪುಸ್ತಕ, ಪೌಷ್ಠಿಕಾಂಶಯುಕ್ತ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಸೇರಿದಂತೆ ಹಲವು ಸವಲತ್ತುಗಳನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದೆ. ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಚಿಕ್ಕಂದಿನಿಅದಲೇ ಕ್ರೀಡೆ, ಕಲೆ, ಸಾಹಿತ್ಯಾಸಕ್ತಿ ಮೈಗೂಡಿಸಿಕೊಂಡಲ್ಲಿ ಮುಂದೊಂದು ದಿನ ಸಮಾಜಕ್ಕೆ ಕೊಡುಗೆ ನೀಡಬಹುದು. ಆ ರೀತಿ ಮಕ್ಕಳನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಕರು ಮತ್ತು ಪಾಲಕರ ಮೇಲಿದೆ ಎಂದು ಹೇಳಿದರು.
ತಹಸೀಲ್ದಾರ್ ಡಾ.ಅಶೋಕ್, ತಾಪಂ ಇಒ ಬಿ.ಎಸ್.ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು, ಶಾಲೆ ಮುಖ್ಯಶಿಕ್ಷಕಿ ಗೌರಮ್ಮ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಉಮೇಶ್, ಲೋಕೇಶ್, ಸಾಮಕಹಳ್ಳಿ ನಾಗರಾಜು ಹಲವರು ಇದ್ದರು.