ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಹೆಚ್ಚಿಸಿ

ಕಲಬುರಗಿ ಡಾ.ಎಸ್​.ಎಂ.ಪಂಡಿತ್​ ರಂಗಮಂದಿರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮುಖ್ಯಗುರುಗಳ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಭಂವರಸಿಂಗ್​ ಮೀನಾ ಮಾತನಾಡಿದರು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಇತರರಿದ್ದರು.
ಕಲಬುರಗಿ ಡಾ.ಎಸ್​.ಎಂ.ಪಂಡಿತ್​ ರಂಗಮಂದಿರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮುಖ್ಯಗುರುಗಳ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಭಂವರಸಿಂಗ್​ ಮೀನಾ ಮಾತನಾಡಿದರು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಸಲಹೆ
  • ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ
ಕಲಬುರಗಿ: ಜಿಲ್ಲೆಯ ಪ್ರತಿಯೊಂದು ಶಾಲೆಯೂ ಶೇ.100 ಫಲಿತಾಂಶ ಪಡೆಯುವ ಗುರಿ ಹೊಂದಿರಬೇಕು. ಕೇವಲ ತೇರ್ಗಡೆ ಮುಖ್ಯವಲ್ಲ, ವಿದ್ಯಾರ್ಥಿಗಳು ಪಡೆಯುವ ಅಂಕಗಳ ಪ್ರಮಾಣವೂ ಸುಧಾರಿಸಬೇಕು ಎಂದು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್​ ಹೇಳಿದರು.
ನಗರದ ಡಾ.ಎಸ್​.ಎಂ.ಪಂಡಿತ್​ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿಲ್ಲೆಯ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲಾ ಮುಖ್ಯ ಗುರುಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 2025&26 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಾ ಫಲಿತಾಂಶ ಸುಧಾರಣಾ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀೆ&1ರ ಫಲಿತಾಂಶ ವಿಶ್ಲೇಷಣೆಗೆ ಸಂಬಂಧಿಸಿದಂತೆ ತಾಲೂಕುವಾರು ಮತ್ತು ಶಾಲವಾರು ಮಾಹಿತಿ ಪಡೆದು, ಪೂರ್ವಸಿದ್ಧತಾ ಪರೀೆ&2 ಮತ್ತು 3 ಹಾಗೂ ವಾರ್ಷಿಕ ಪರೀೆಯಲ್ಲಿ ಮಕ್ಕಳು ಚನ್ನಾಗಿ ಬರೆಯಲು ಶಿಕ್ಷಕರು ಪ್ರಯತ್ನಿಸಬೇಕು ಎಂದರು.
ಫಲಿತಾಂಶ ಸುಧಾರಣೆ ಡಿಡಿಪಿಐ, ಬಿಇಓಗಳು ಮಾಡುವ ಕೆಲಸವಲ್ಲ. ಶಿಕ್ಷಕರು ಮಾಡಬೇಕಾಗಿರುವ ಕೆಲಸ. ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಯಿಂದ ಹಾಜರಾಗದ ಮುಖ್ಯ ಶಿಕ್ಷಕರಿಗೆ ನೋಟಿಸ್​ ಜಾರಿ ಮಾಡವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ ಅವರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಭಂವರ್​ಸಿಂಗ್​ ಮೀನಾ ಮಾತನಾಡಿ, ಪರೀೆಗೆ ಇನ್ನೂ 54 ದಿನ ಮಾತ್ರ ಉಳಿದಿವೆ. ಇದರಲ್ಲಿ ನಿಮ್ಮ ಶ್ರಮದ ಅಗತ್ಯವಿದೆ. ಮಕ್ಕಳ ಪ್ರಗತಿಯ ಬಗ್ಗೆ ಚರ್ಚಿಸಲು ಪೋಷಕರ ಸಭೆ ಕರೆದು, ಮನೆಯಲ್ಲಿ ವಿದ್ಯಾರ್ಥಿಗಳ ಓದಿಗೆ ಪೂರಕ ವಾತಾವರಣ ಇರುವಂತೆ ನೋಡಿಕೊಳ್ಳಲು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ಶಿಕ್ಷಣ ಸಮಾಜದ ಬೆನ್ನೆಲುಬು, ಎಸ್ಸೆಸ್ಸೆಲ್ಸಿ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯದ ದಾರಿ ನಿರ್ಧರಿಸುತ್ತದೆ. ಹೀಗಾಗಿ ಜಿಲ್ಲೆಯ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಮುಖ್ಯಗುರುಗಳು ಕಾರ್ಯನಿರ್ವಹಿಸಬೇಕು ಎಂದರು.
ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪ್ರಾಕ್ಟೀಸ್​ ಮಾಡಿಸಿ, 29 ಅಂಶಗಳು, 40+ ಮಿಷನ್​ ಅನುಸರಿಸಿ ಹಾಗೂ ನೀಲಿನೆ ಪ್ರಕಾರ ಅಭ್ಯಾಸ ಮಾಡಿಸಿ, ಸಾಧ್ಯವಾದಲ್ಲಿ ನಾವು ವಾಟ್ಸ್​ಆ್ಯಪ್​ ಗ್ರೂಪ್​ ಮಾಡಿ ಪರೀೆಗೆ ವಿವಿಧ ಸಹಾಯಕಾರಿ ಬೋಧನಾ ಅಂಶಗಳನ್ನು ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.
ಅನೇಕ ಎಚ್​ಎಂಗಳು ಮಾತನಾಡಿದರು. ಡಯಟ್​ ಪ್ರಾಚಾರ್ಯ ಬಸವರಾಜ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಅಪರ ಆಯುಕ್ತರ ಕಚೇರಿಯ ಸಹ ನಿರ್ದೇಶಕ ನಾಗೂರು ಇತರರಿದ್ದರು.
"

ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆದು ವಿಶೇಷ ತರಬೇತಿ ನೀಡಬೇಕು. ಕಳೆದ 1 ವರ್ಷದಿಂದ ಪರೀೆಯಲ್ಲಿ ಕಲಬುರಗಿ ಜಿಲ್ಲೆ ಕಡಿಮೆ ಸ್ಥಾನ ಪಡೆದಿದ್ದು, ಅದನ್ನು ಸುಧಾರಿಸಲು, ಮಕ್ಕಳು ಉತ್ತೀರ್ಣರಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಬಿ.ಫೌಜಿಯಾ ತರನ್ನುಮ್​,

ಜಿಲ್ಲಾಧಿಕಾರಿ, ಕಲಬುರಗಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net