ವಿದ್ಯಾರ್ಥಿಗಳು ದೇಶಾಭಿಮಾನ ಮೈಗೂಡಿಸಿಕೊಳ್ಳಿ
| ಶಿಕ್ಷಕ ಮಹಾಂತೇಶ ಪಾಟೀಲ ಕರೆ | ದಡ್ಡಿ ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ
ವಿಜಯವಾಣಿ ಸುದ್ದಿಜಾಲ ದಡ್ಡಿ :
ವಿದ್ಯಾರ್ಥಿಗಳ ಸ್ವಾತಂತ್ರ್ಯ ಹೋರಾಟಗಾರರ ಜೀವನ, ಸಾಧನೆ, ಹೋರಾಟ, ದೇಶ ಪ್ರೇಮ ತಿಳಿದುಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ದಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ ಪಾಟೀಲ ಅವರು ಕರೆ ನೀಡಿದರು.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶಾಭಿಮಾನ ಎಂದರೇ ರಾಷ್ಟçದ ಬಗ್ಗ ಗೌರವ ನೀಡುವುದರ ಜತೆಗೆ ದೇಶದ ಅಭಿವೃದ್ದಿಗೆ ಶ್ರಮಿಸಬೇಕು ಎಂದರು.
ಇದೇ ವೇಳೆ ವಿದ್ಯಾರ್ಥಿಗಳು ವಿವಿಧ ಮಹನೀಯರ ವೇಷಭೂಷಣ ಧರಿಸಿ ಗ್ರಾಮದಲ್ಲಿ ಸಂಚರಿಸಿ, ದೇಶಭಕ್ತಿ ಹಾಗೂ ಸ್ವಾತಂತ್ರ್ಯದ ಮಹತ್ವದ ಸಂದೇಶ ಸಾರಿದರು.ಹಾಗೂ ಪರೀಕ್ಷೆಯಲ್ಲಿ ಉತ್ತಮ ಪಡೆದ, ಕ್ರೀಡೆಯಲ್ಲಿ ಸಾಧನೆ ಮಾಡಿದ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಶಿಕ್ಷಕ ವಿನೋದ ಪಟೋಳಿ, ಸಂಪತರಾವ್ ಬಾಂಧುರ್ಗೆ, ರಾಹುಲ ನೀಲೇಶ ಬಾಂಧುರ್ಗೆ, ಎಂ.ಬಿ. ಸಂಗಗೋಡೆ, ದಯಾನಂದ ಪಾಟೀಲ, ಎಂ.ಎ. ಪಾಟೀಲ ಇತರರಿದ್ದರು.