ಚಿಂಚೋಳಿ: ಪಟ್ಟಣದ ಶಿವಸಾಯಿ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಉಚಿತ ಬಂಜೆತನ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಡಾ.ಎನ್.ಶಿವಗೀತಾ ಪಾಟೀಲ್ ತಿಳಿಸಿದ್ದಾರೆ. ತಾಲೂಕಿನ ಜನತೆಗಾಗಿ ಶಿಬಿರ ಆಯೋಜಿಸಲಾಗಿದೆ. ಉಚಿತ ಬಂಜೆತನ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಲು ನಿಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂಡು ಬರಬೇಕು. ಮುಂಚಿತವಾಗಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.