ತುರುವೇಕೆರೆ: ಗ್ರಾಮೀಣ ಭಾಗದ ದಲಿತರ ಕಾಲನಿಗಳಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ತಾಲೂಕಿನ ಹರಿದಾಸನಹಳ್ಳಿ ಕಾಲನಿಯಲ್ಲಿ ಮುಖಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಿಂದ ಸುಮಾರು 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನಾದ್ಯಂತ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಸಿಸಿ ರಸ್ತೆ, ಚರಂಡಿ ಕಾಮಗಾರಿ ಮಾಡಲಾಗುತ್ತಿದೆ ಎಂದರು.
ಗ್ರಾಪಂ ಮಾಜಿ ಸದಸ್ಯ ವೆಂಕಟರಾಮಯ್ಯ, ಜೆಡಿಎಸ್ ತಾಲೂಕು ಸಂಘಟನಾ ಕಾರ್ಯದರ್ಶಿ ಶಶಿಧರ್, ಮುಖಂಡರಾದ ನಿಜಲಿಂಗಪ್ಪ, ನಾಗರಾಜು, ಮೂಡ್ಲಪ್ಪ, ಮಹಾಲಿಂಗಯ್ಯ, ಶಿವಣ್ಣ, ನಂಜಪ್ಪ, ರಾಜಣ್ಣ, ಲಕ್ಷ್ಮೀಪತಿ, ಉಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.