ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಸೂಚನೆ

ಗುರುಮಠಕಲ್ ತಾಲೂಕಿನ ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಅತಿಥಿ ಗೃಹದಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಮಾತನಾಡಿದರು. ಜಂಟಿ ಕೈಗಾರಿಕಾ ನಿರ್ದೇಶಕ ಸತೀಶಕುಮಾರ, ಡಿವೈಎಸ್‌ಪಿ ಸುರೇಶ ನಾಯಕ, ಕಾರ್ಮಿಕ ಇಲಾಖೆ ಅಽಕಾರಿ ಶ್ರೀಹರಿ ದೇಶಪಾಂಡೆ ಇತರರಿದ್ದರು.
ಗುರುಮಠಕಲ್ ತಾಲೂಕಿನ ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಅತಿಥಿ ಗೃಹದಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಮಾತನಾಡಿದರು. ಜಂಟಿ ಕೈಗಾರಿಕಾ ನಿರ್ದೇಶಕ ಸತೀಶಕುಮಾರ, ಡಿವೈಎಸ್‌ಪಿ ಸುರೇಶ ನಾಯಕ, ಕಾರ್ಮಿಕ ಇಲಾಖೆ ಅಽಕಾರಿ ಶ್ರೀಹರಿ ದೇಶಪಾಂಡೆ ಇತರರಿದ್ದರು.
Published on

ಜಿ¯್ಲೆಯ ಎಲ್ಲ ಕೈಗಾರಿಕೆಗಳನ್ನು ಮುಂದಿನ ೧೫ ದಿನಗಳೊಳಗೆ ಸಮಗ್ರವಾಗಿ ಪರಿಶೀಲಿಸಿ, ಸುರಕ್ಷತಾ ಹಾಗೂ ಪರಿಸರ ನಿಯಮ್ನ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಅಽಕಾರಿಗಳಿಗೆ ಸೂಚನೆ ನೀಡಿದರು.

ಗುರುಮಠಕಲ್ ತಾಲೂಕಿನ ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲï ಕಂಪನಿಯಲ್ಲಿ ಕಳೆದ ಬುಧವಾರ ಬೆಳಗಿನ ಜಾವ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಬೆನ್ನ¯್ಲÉ ಕೈಗಾರಿಕಾ ಪ್ರದೇಶದ ಅತಿಥಿ ಗೃಹದಲ್ಲಿ ಶುಕ್ರವಾರ ಸಂಜೆ ಸಂಬAಽಸಿದ ಅಽಕಾರಿಗಳ ಜತೆಗೆ ತುರ್ತು ಸಭೆ ಕರೆದು ಮಾತನಾಡಿದ ಅವರು, ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯು ಸಹ ಎಲ್ಲ ಕೈಗಾರಿಕೆಗಳ ಪರಿಸರ ನಿಯಮಗಳ ಪಾಲನೆ ಪರಿಶೀಲಿಸಿ, ತ್ಯಾಜ್ಯವನ್ನು ಅಕ್ರಮವಾಗಿ ವಿಸರ್ಜಿಸುವ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪ್ರತಿ ಕೈಗಾರಿಕೆಯಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಪೊಲೀಸ್ ಪರಿಶೀಲನೆ ಕಡ್ಡಾಯಗೊಳಿಸಬೇಕು. ಜತೆಗೆ ಅರ್ಹ ಕಾರ್ಮಿಕರನ್ನು ಇಎಸ್‌ಐಸಿ ಹಾಗೂ ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಾಯಿಸಲು ಕಾರ್ಮಿಕ ಇಲಾಖೆಗೆ ನಿರ್ದೇಶನ ನೀಡದ ಅವರು, ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಲಾರಿಗಳಿಗೆ ಏಕೆ ಪ್ರವೇಶ ವ್ಯವಸ್ಥೆ ಜಾರಿಗೊಳಿಸಬೇಕು. ವಾಹನಗಳ ದಾಖಲಾತಿ ನಿರ್ವಹಿಸುವುದು ಹಾಗೂ ರಾತ್ರಿ ವೇಳೆ ಭಾರೀ ವಾಹನಗಳ ಸಂಚಾರ ನಿಯಂತ್ರಿಸುವAತೆಯೂ ತಾಕೀತು ಮಾಡಿದರು.
ಸಭೆಯಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಸತೀಶಕುಮಾರ, ಡಿವೈಎಸ್‌ಪಿ ಸುರೇಶ ನಾಯಕ, ಕಾರ್ಮಿಕ ಇಲಾಖೆ ಅಽಕಾರಿ ಶ್ರೀಹರಿ ದೇಶಪಾಂಡೆ, ಕಾರ್ಖಾನೆಗಳ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಐಎಡಿಬಿ ಅಽಕಾರಿಗಳು ಹಾಗೂ ವಿವಿಧ ಕೈಗಾರಿಕೆಗಳ ಪ್ರತಿನಿಽಗಳು ಸಭೆಯಲ್ಲಿ ಭಾಗವಹಿಸಿದ್ದರು.

ಯಾವುದೇ ರಾಜಿ ಇಲ್ಲ

ಕೈಗಾರಿಕಾ ಸುರಕ್ಷತೆ, ಪರಿಸರ ಸಂರಕ್ಷಣೆ ಹಾಗೂ ಕಾರ್ಮಿಕರ ಹಿತಾಸಕ್ತಿಗೆ ಯಾವುದೇ ರಾಜಿ ಇಲ್ಲ. ನಿಗದಿತ ಅವಽಯಲ್ಲಿ ಪರಿಶೀಲನೆ ಪೂರ್ಣಗೊಳಿಸಿ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಜಿ¯್ಲÁಽಕಾರಿಗಳು ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net