ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳ ಪರಿಶೀಲನೆ

Hostel canteen ride
Hostel canteen ride
Published on

ಪ್ರಮುಖ ಮುಖ್ಯಾಂಶಗಳು

  • - ಲೋಪದೋಷಗಳು ಕಂಡು ಬಂದ 5 ಕ್ಯಾಂಟೀನ್‌ಗಳಿಗೆ ನೋಟಿಸ್

ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34 ಕ್ಯಾಂಟೀನ್ ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಈ ವೇಳೆ ಲೋಪದೋಷಗಳು ಕಂಡು ಬಂದ 5 ಕ್ಯಾಂಟೀನ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ತಪಾಸಣೆಯ ವೇಳೆ ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಕಂಡುಬಂದಿದ್ದು, ಅಡುಗೆ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಅವಧಿ ಮೀರಿದ 07 ಕೆ.ಜಿ. ರವೆ ಹಾಗೂ 08 ಲೀಟರ್ ಹಾಲನ್ನು ಪತ್ತೆಹೆಚ್ಚಿ ಜಪ್ತಿ ಮಾಡಲಾಗಿದೆ. ಈ ರೀತಿಯ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ, ಸಂಬಂಧಿತ ಆಹಾರ ಉದ್ದಿಮೆದಾರರ ವಿರುದ್ಧ ಅನ್ವಯವಾಗುವ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಮಾನದಂಡಗಳ ಕಾಯ್ದೆ/ನಿಯಮಗಳನ್ವಯ ಪ್ರಕರಣ ದಾಖಲಿಸಿ, ಸಕ್ಷಮ ಪ್ರಾಧಿಕಾರವಾದ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net