ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಿ human values

ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಿ human values
ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಿ human values
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀಬಾರ್ಕೂರು ಮಠದ ಶ್ರೀ ವಿದ್ಯಾವಾಚಸ್ಪತಿ ಡಾ.ವಿಶ್ವ ಸಂತೋಷ ಭಾರತಿ ಶ್ರೀಪಾದರು ಸಲಹೆ
ನೆಲಮಂಗಲ: ಶಿಕ್ಷಕರು ಮತ್ತು ಪಾಲಕರು ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತುವುದರಿಂದ ದೇಶಕ್ಕೊಬ್ಬ ಸತಜೆ ನೀಡಿದಂತಾಗುತ್ತದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ವಿದ್ಯಾವಾಚಸ್ಪತಿ ಡಾ.ವಿಶ್ವ ಸಂತೋಷ ಭಾರತಿ ಶ್ರೀಪಾದರು ತಿಳಿಸಿದರು. human values
ಬೆಂಗಳೂರು ಉತ್ತರ ತಾಲೂಕಿನ ನಂದರಾಮಯ್ಯನಪಾಳ್ಯದ ಬ್ಲೂಮೂನ್​ ಪಬ್ಲಿಕ್​ ಶಾಲೆಯಲ್ಲಿ ಕಲಾಸಿರಿ&-2026 ಶೀರ್ಷಿಕೆಯಡಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜತೆಗೆ ಆಧ್ಯಾತ್ಮಿಕ ವಿಚಾರದ ಬಗ್ಗೆ ತಿಳಿಸಬೇಕಿದೆ. ಪ್ರಸ್ತುತ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡಿರುವ ಪರಿಣಾಮ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಬತ್ತಿ ಹೋಗುತ್ತಿವೆ. ಅವರಲ್ಲಿ ಪಾಲಕರು ಬಗ್ಗೆಯೂ ಪ್ರೀತಿ, ಗೌರವ ಕಡಿಮೆಯಾಗಿ ನಕಾರಾತ್ಮಕ ಮನೋಭಾವ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸದಿದ್ದರೆ ಎಂತಹ ಪದವಿ ಪಡೆದರೂ ಅದು ಸಮಾಜಕ್ಕೆ ಉಪಯುಕ್ತವಾಗಲಾರದು. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಜತೆಗೆ ಸಂಸ್ಕಾರ, ಮಾನವೀಯ ಮೌಲ್ಯವನ್ನು ಬಿತ್ತುತ್ತಿರುವ ಬ್ಲೂಮೂನ್​ ಶಾಲೆ ಕಾರ್ಯ ಶ್ಲಾಘನೀಯ ಎಂದರು.
ನಿವೃತ್ತ ಯೋಧ ಬಿ.ಕೆ.ಕುಮಾರಸ್ವಾಮಿ ಮಾತನಾಡಿ, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗುತ್ತಿದ್ದು, ಅದಕ್ಕೆ ತಕ್ಕಂತೆ ಮಕ್ಕಳು ಹೊಂದಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಬೆಳೆಯಬೇಕಾದರೆ ಬಾಲ್ಯದಿಂದಲೇ ಉತ್ತಮ ಶಿಕ್ಷಣದ ಅಗತ್ಯವಿದೆ. ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸುವುದರ ಜತೆಗೆ ಅವರ ಪಾತ್ರದ ಬಗ್ಗೆಯೂ ನಿಗಾ ವಹಿಸಬೇಕು. ಉತ್ತಮ ಶಿಕ್ಷಣದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲೆ ಕೆಡಿಪಿ ಸದಸ್ಯ ಲಕ್ಷ$್ಮಣ್​ಮೂರ್ತಿ, ಮುಖಂಡ ರಮೇಶ್​, ಕೃಷ್ಣಪ್ಪ, ಶಾಲಾ ಮುಖ್ಯ ಶಿಕ್ಷಕಿ ನಾಗರತ್ನಮ್ಮ, ಅನುಷಾ, ಕೋಕಿಲಾ, ಮಹೇಶ್​, ಅಮೋಘ್​, ಯಾಕೂಬ್​ ಇತರರು ಇದ್ದರು.
ಪ್ರತಿಭಾ ಪುರಸ್ಕಾರ : ಕಳೆದ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಶಾಲೆಯ 17 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗೀತಗಾಯನ : ಕಲಾಸಿರಿ&2026ರ ಶಾಲಾ ವಾರ್ಷಿಕೋತ್ಸವದಲ್ಲಿ ಗಾಯಕ ನವೀನಸಜ್ಜು ಅವರು ಗೀತಗಾಯನ ನಡೆಸಿದರು. ವಿದ್ಯಾರ್ಥಿಗಳು ಸಾಂಸತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net