ವಿಶ್ವ ಕೌಶಲ ಸ್ಪರ್ಧೆ ತರಬೇತಿಗೆ ನೋಂದಣಿಗೆ ಸೂಚನೆ

ವಿಶ್ವ ಕೌಶಲ ಸ್ಪರ್ಧೆ’
ವಿಶ್ವ ಕೌಶಲ ಸ್ಪರ್ಧೆ’
Published on

ಪ್ರಮುಖ ಮುಖ್ಯಾಂಶಗಳು

  • ಕೌಶಲ ಸ್ಪರ್ಧೆಗೆ ತರಬೇತಿ, ಮಾರ್ಗದರ್ಶನ ಹಾಗೂ ಚಟುವಟಿಕೆಗಳಿಗೆ ಚಾಲನೆ ನೀಡಲು ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕಿದೆ.
  • 2026-27ನೇಸಾಲಿನಲ್ಲಿ ‘ಕರ್ನಾಟಕ ರಾಜ್ಯ ಕೌಶಲ ಒಲಿಂಪಿಕ್ಸ್ ಕಾರ್ಯಕ್ರಮಕ್ಕೆ’ ಜಿಲ್ಲಾ ವಲಯ ಹಾಗೂ ರಾಜ್ಯಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗುತ್ತಿದೆ.
  • ಈ ಸ್ಪರ್ಧೆಗೆ ವಿದ್ಯಾರ್ಥಿಗಳು ಸೆ.15ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಲಿಂಕ್ ಅನ್ನು ನೀಡಲಾಗಿದೆ.
ಬೆಂಗಳೂರು: ಮುಂದಿನ ವರ್ಷ ಜಪಾನ್‌ನಲ್ಲಿ ನಡೆಯಲಿರುವ ‘ವಿಶ್ವ ಕೌಶಲ ಸ್ಪರ್ಧೆ’ಗೆ ರಾಜ್ಯದ ಪ್ರತಿಭಾವಂತ ಯುವ ಜನತೆಯನ್ನು ಗುರುತಿಸಿ ಸೂಕ್ತ ತರಬೇತಿ, ಮಾರ್ಗದರ್ಶನ ನೀಡಲಾಗುತ್ತಿದೆ. ಇದಕ್ಕಾಗಿ ವಿದ್ಯಾರ್ಥಿಗಳು ‘ಸ್ಕಿಲ್ ಇಂಡಿಯಾ ಡಿಜಿಟಲ್ ಹಬ್ ಪೋರ್ಟಲ್’ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಕೌಶಲ ಸ್ಪರ್ಧೆಗೆ ತರಬೇತಿ, ಮಾರ್ಗದರ್ಶನ ಹಾಗೂ ಚಟುವಟಿಕೆಗಳಿಗೆ ಚಾಲನೆ ನೀಡಲು ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕಿದೆ. 2026-27ನೇಸಾಲಿನಲ್ಲಿ ‘ಕರ್ನಾಟಕ ರಾಜ್ಯ ಕೌಶಲ ಒಲಿಂಪಿಕ್ಸ್ ಕಾರ್ಯಕ್ರಮಕ್ಕೆ’ ಜಿಲ್ಲಾ ವಲಯ ಹಾಗೂ ರಾಜ್ಯಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗುತ್ತಿದೆ. ಈ ಸ್ಪರ್ಧೆಗೆ ವಿದ್ಯಾರ್ಥಿಗಳು ಸೆ.15ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಲಿಂಕ್ ಅನ್ನು ನೀಡಲಾಗಿದೆ.
ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು, ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಸ್ಪರ್ಧೆ ಕುರಿತು ಜಾಗೃತಿ ಮೂಡಿಸುವಂತೆ ತಿಳಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net