ವಿವಿಧ ಯೋಜನೆಗಳನ್ನು ಪೂರ್ಣಗೊಳಿಸಲು ಸೂಚನೆ

ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ವಿವಿಧ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕೃಷ್ಣಮೂರ್ತಿ ಕುಲಕರ್ಣಿ, ಬಸವರಾಜ, ಗೋವಿಂದ ಇತರರಿದ್ದಾರೆ.
ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ವಿವಿಧ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕೃಷ್ಣಮೂರ್ತಿ ಕುಲಕರ್ಣಿ, ಬಸವರಾಜ, ಗೋವಿಂದ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಯಶವಂತರಾಯಗೌಡ ಪಾಟೀಲ ಮಾಹಿತಿ
  • ಪ್ರಗತಿ ಪರಿಶೀಲನಾ ಸಭೆ
ಇಂಡಿ : ಕಾಮಗಾರಿಗಳ ಗುಣಮಟ್ಟ ಕಾರ್ಯಗತಗೊಳಿಸುವ ವೇಗ ರೈತರಿಗೆ ದೊರೆಯಲಿರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೈಕೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಖ್ಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಹೊರ್ತಿ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣಾ ಕಾಲುವೆ ಕಾಮಗಾರಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀರಾವರಿ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ರೈತರ ಹೊಲಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷೃ ವಹಿಸದೆ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಹೊರ್ತಿ ರೇವಸಿದ್ಧೇಶ್ವರ ಯೋಜನೆ ಹಾಗೂ ತಿಡಗುಂದಿ ವಿಸ್ತರಣಾ ಕಾಲುವೆ ಕಾಮಗಾರಿಗಳು ಪೂರ್ಣಗೊಂಡಲ್ಲಿ ಇಂಡಿ ಸೇರಿ ಸುತ್ತಮುತ್ತಲಿನ ಪ್ರದೇಶಗಳ ರೈತರಿಗೆ ಮಹತ್ತರ ಅನುಕೂಲವಾಗಲಿದ್ದು, ಕೃಷಿ ಉತ್ಪಾದನೆ ಹೆಚ್ಚಳದೊಂದಿಗೆ ರೈತರ ಅರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ. ಈ ಯೋಜನೆಗಳು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ, ಆಲಮಟ್ಟಿ ಮುಖ್ಯ ಅಭಿಯಂತರ ಬಸವರಾಜ, ಅಧಿಕ್ಷಕ ಅಭಿಯಂತರ ಗೋವಿಂದ ರಾಠೋಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net