ಸಂಚಾರಿ ನಿಯಮ ಪಾಲಿಸಲು ಸೂಚನೆ

ಬಸವನಬಾಗೇವಾಡಿ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೈಕ್‌ಗಳನ್ನು ಖಾಸಗಿ ವಾಹನ ದ ಮೂಲಕ ಠಾಣೆಗೆ ತೆಗೆದುಕೊಂಡು ಹೋಗುತ್ತಿರುವುದು.
ಬಸವನಬಾಗೇವಾಡಿ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೈಕ್‌ಗಳನ್ನು ಖಾಸಗಿ ವಾಹನ ದ ಮೂಲಕ ಠಾಣೆಗೆ ತೆಗೆದುಕೊಂಡು ಹೋಗುತ್ತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಪಿಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ಕಾರ್ಯಚರಣೆ
  • ಪೊಲೀಸರು ಬೈಕ್ ಸವಾರರಿಗೆ ದಂಡ
ಬಸವನಬಾಗೇವಾಡಿ: ಪಟ್ಟಣ ಸೇರಿ ತಾಲೂಕಿನಾದ್ಯಂತ ಬೈಕ್ ಕಳ್ಳತನ ತಡೆಯುವ ನಿಟ್ಟಿನಲ್ಲಿ ಪಿಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ಸೋಮವಾರ ಬೈಕ್ ಕಾರ್ಯಾಚರಣೆ ನಡೆಸುವ ಮೂಲಕ ಬೈಕ್ ಸವಾರರಿಗೆ ಪೊಲೀಸರು ಶಾಕ್ ನೀಡಿದರು.
ಪಟ್ಟಣದಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ಬೈಕ್‌ಗಳನ್ನು ಹಾಗೂ ಹ್ಯಾಂಡಲ್ ಲಾಕ್, ನಂಬರ್ ಪ್ಲೇಟ್ ಇಲ್ಲದ ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು ಬೈಕ್ ಸವಾರರಿಗೆ ದಂಡ ವಿಧಿಸುವುದರೊಂದಿಗೆ ಸಂಚಾರಿ ನಿಯಮ ಪಾಲಿಸುವಂತೆ ಸೂಚನೆ ನೀಡಿದರು.
ಪಿಐ ಗುರುಶಾಂತ ದಾಶ್ಯಾಳ ಮಾತನಾಡಿ, ಪ್ರತಿಯೊಬ್ಬರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಬೇಕು. ರಸ್ತೆ ಪಕ್ಕದ ವೈಟ್ ಲೈನ್ ಒಳಗಡೆಯೆ ಬೈಕ್ ನಿಲ್ಲಿಸಬೇಕು. ಕಡ್ಡಾಯವಾಗಿ ಹ್ಯಾಂಡಲ್ ಲಾಕ್ ಮಾಡಿಕೊಂಡಿರಬೇಕು. ಇದರಿಂದ ಬೈಕ್ ಕಳ್ಳತನ ಪ್ರಕರಣಗಳನ್ನು ತಡೆಯಬಹುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡಿದಾಗ ಮಾತ್ರ ಸಮಾಜದಲ್ಲಿನ ಅಕ್ರಮ ತಡೆಯುವುದರೊಂದಿಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಎಲ್ಲೆಲ್ಲಿ ಕಾರ್ಯಚರಣೆ: ಪಟ್ಟಣದ ಬಸ್ ನಿಲ್ದಾಣದ ಮುಂಭಾಗ, ಬಸವೇಶ್ವರ ವೃತ್ತ, ಎಸ್‌ಬಿಐ ಬ್ಯಾಂಕ್ ಮುಂಭಾಗ, ಇಂಗಳೇಶ್ವರ ರಸ್ತೆ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ ಸೇರಿ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೈಕ್‌ಗಳನ್ನು
ಖಾಸಗಿ ವಾಹನದ ಮೂಲಕ ಠಾಣೆಗೆ ತೆಗೆದುಕೊಂಡು ಹೋದರು.
ಎಎಸ್‌ಐ ಎಸ್.ವೈ. ಕುಪ್ಪಿಗೌಡರ, ಪೊಲೀಸ್ ಸಿಬ್ಬಂದಿ ಜಗದೀಶ ತಕ್ಕೊಡ, ರಮೇಶ ಗೊಳಿ, ಸಂಜು ಕೊಂಡಗೊಳಿ, ಈರಣ್ಣ ಹೊಸಗೌಡರ, ಭೀಮಣ್ಣ ಬೈರಮಟ್ಟಿ, ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net