

ರಾಯಚೂರು ಬಹು ವರ್ಷಗಳ ನಂತರ ರಾಯಚೂರು ಜಿಲ್ಲೆಯಲ್ಲಿ ಜ.29 ರಿಂದ 31ರಂದು ನಿಗದಿಯಾದ ರಾಯಚೂರು ಉತ್ಸವ 2026ರ ಸಾಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನಗರದ ತಾಪಂ ಕಚೇರಿ ಸಂಭಾಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪರೇಷಗಳ ಕುರಿತು ಶಾಸಕರು, ಗ್ರಾಮೀಣ ಕ್ಷೇತ್ರದ ವಿವಿಧ ಕಲಾತಂಡಗಳು, ಸಾಹಿತಿಗಳು, ವಿದ್ವಾಂಸರು, ಲೇಖಕರು, ಕ್ರೀಡಾಸಕ್ತರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.
ಸಂದರ್ಭದಲ್ಲಿ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ, ಡಿಎಸ್ಪಿ ಶಾಂತವೀರ, ತಹಶೀಲ್ದಾರ್ ಸುರೇಶ ವರ್ಮ, ತಾಪಂ ಇಓ ಚಂದ್ರಶೇಖರ ಪವಾರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಗ್ಯಾರಂಟಿ ಕಮಿಟಿಯ ತಾಲೂಕು ಅಧ್ಯಕ್ಷ ಪವನ ಕಿಶೋರ್ ಪಾಟೀಲ್ ಇದ್ದರು.