ದೊಡ್ಡಬಳ್ಳಾಪುರ : ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರನ್ನು ಬಂಧಿಸಿದ್ದಾರೆ., 11.42 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಖಾಗರಿಯಾ ಜಿಲ್ಲೆಯ ಗೋಗರಿ ತಾಲೂಕಿನ ನಿವಾಸಿಗಳಾದ ಗೌರವ್ ಕುಮಾರ್ (19) ಹಾಗೂ ವಿಶಾಲ್ ಕುಮಾರ್ (22) ಬಂಧಿತರು.
ಏನಿದು ಪ್ರಕರಣ?: ಜೂ.15ರಂದು ಸರಳಾ ಚಂದ್ರಶೇಖರ್ ಅವರ ಮನೆಯಲ್ಲಿ ಮಾಂಗಲ್ಯ ಸರ, ನೆಕ್ಲೇಸ್, ನಗದು ಹಣ ಹಾಗೂ ಬೈಕ್ ಕಳವಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ವಿ.ಚಂದ್ರಕಾಂತ್ ಮಾರ್ಗದರ್ಶನ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ, ಎ.ವಿ.ಲಕ್ಷಿ$್ಮನಾರಾಯಣ ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, 9.75 ಲಕ್ಷ ರೂ. ಮೌಲ್ಯದ 85 ಗ್ರಾಂ ಚಿನ್ನಾಭರಣ, 67 ಸಾವಿರ ರೂ. ನಗದು ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದೆ.