

ಪ್ರಮುಖ ಮುಖ್ಯಾಂಶಗಳು
ಭಾಲ್ಕಿ: ಬಸವಕಲ್ಯಾಣದಲ್ಲಿ ನವೆಂಬರ್ನಲ್ಲಿ ಆಯೋಜಿಸಿರುವ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ, ಬಸವ ಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಸಮಾರಂಭಕ್ಕೆ ಕಲ್ಲಿದ್ದಲು ಮತ್ತು ಗಣಿ ಸಚಿವ ಕಿಶನರೆಡ್ಡಿ ಅವರನ್ನು ಆಹ್ವಾನಿಸಲಾಗಿದೆ. ನವದೆಹಲಿ ಸಂಸತ್ ಭವನದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರ ನೇತೃತ್ವದಲ್ಲಿ ಗುರುವಾರ ಸಚಿವ ಕಿಶನರೆಡ್ಡಿ ಅವರಿಗೆ ಉತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಜಗತ್ತಿನ ಮೊಟ್ಟಮೊದಲ ಸಂಸತ್ ಆಗಿರುವುದು ಸಮಸ್ತ ಭಾರತೀಯರಿಗೆ ಅಭಿಮಾನದ ಸಂಗತಿ. ಬಸವಾದಿ ಶರಣರು ಅನುಭವ ಮಂಟಪ ಮೂಲಕ ಸಮಸಮಾಜ ನಿರ್ಮಾಣ ಮಾಡಿದರು. ಶರಣರ ವಿಚಾರಧಾರೆಯನ್ನು ಜಗತ್ತಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ 46 ವರ್ಷದಿಂದ ಬಸವಕಲ್ಯಾಣದಲ್ಲಿ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ನಡೆಸಲಾಗುತ್ತಿದೆ. ನ.28, 29ರಂದು ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಜರುಗುವ ಉತ್ಸವದಲ್ಲಿ ಭಾಗವಹಿಸಬೇಕು ಎಂದು ಸಚಿವರಲ್ಲಿ ಪೂಜ್ಯರು ಕೋರಿದರು. ರಾಜ್ಯ ಮಕ್ಕಳ ಹಕ್ಕುಗಳ ರಣಾ ಆಯೋಗದ ನಿಕಟಪೂರ್ವ ಅಧ್ಯ ಶಶಿಧರ ಕೋಸಂಬೆ ಇದ್ದರು.