ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿರುವ ಬಗ್ಗೆ ಕೇಳಿದಾಗ, "ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ" ಎಂದರು.