ಚನ್ನರಾಯಪಟ್ಟಣ : ಸರ್ಕಾರವು ಯಾವುದೇ ನಿರ್ಬಂಧವಿಲ್ಲದೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಮಿಯನ್ನು ಕೃಷಿ ವಲಯವನ್ನಾಗಿ ಮುಂದುವರಿಸಿ, ಕೂಡಲೇ ಭೂಸ್ವಾಧಿನ ಪ್ರಕ್ರಿಯೆ ಕೈ ಬಿಡುವ ಅಧಿಕೃತ ಆದೇಶ ಹೊರಡಿಸುವಂತೆ ಭೂಸ್ವಾಧಿನ ವಿರೋಧಿ ಹೋರಾಟಗಾರ ಕಾರಳ್ಳಿ ಶ್ರೀನಿವಾಸ್ ಒತ್ತಾಯಿಸಿದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಭೂ ಸ್ವಾಧಿನ ವಿರೋಧಿ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಧರಣಿಯಲ್ಲಿ ಮಾತನಾಡಿದರು.ರೈತರು ಮತ್ತು ಸಂಘಟನೆಗಳ ಪ್ರತಿರೋಧದ ನಂತರ ಸರ್ಕಾರ ಜು.15ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭೂಸ್ವಾಧಿನವನ್ನು ಸಂಪೂರ್ಣವಾಗಿ ಕೈ ಬಿಟ್ಟಿರುವುದಾಗಿ ಘೋಷಿಸಲಾಗಿತ್ತು. ಅವರ ಮಾತಿನಂತೆ ಯಾವುದೇ ಷತ್ತುಗಳಿಲ್ಲದೇ ಭೂ ಸ್ವಾಧಿನ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
1,339 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಸಭೆ ನಡೆಸಿದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶಿಾರಸಿನ ಪತ್ರದ ಬಗ್ಗೆ ಚರ್ಚಿಸಲಾಗಿ ಶಾಶ್ವತ ವಿಶೇಷ ಕೃಷಿ ವಲಯ ಎಂದು ಘೋಷಿಸುವ ಮತ್ತು ಪಹಣಿಯಲ್ಲಿ ದಾಖಲಿಸುವ, ನಿಯಮಗಳನ್ನು ರೂಪಿಸಲು ಸಮಿತಿ ರಚಿಸಲು ಸಲ್ಲಿಸಿರುವ ಪ್ರಸ್ತಾವನೆಯನ್ನು ಭೂ ಸ್ವಾಧಿನ ವಿರೋಧಿ ಹೋರಾಟ ಸಮಿತಿ ಪ್ರಭಲವಾಗಿ ಖಂಡಿಸುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ರೀತಿಯಲ್ಲಿಯೇ ಕೃಷಿ ಭೂಮಿಯನ್ನು ಯಾವುದೇ ಷತ್ತುಗಳಿಲ್ಲದೆ ರೈತರಿಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು. ರೈತ ಮಹಿಳೆ ವೆಂಕಟಮ್ಮ ಮಾತನಾಡಿ, ಒಂದುವೇಳೆ ಶಾಶ್ವತ ಕೃಷಿ ವಲಯ ಎಂದು ಘೋಷಿಸದಿದ್ದರೇ ತೀವ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಶಾಶ್ವತ ವಿಶೇಷ ಕೃಷಿ ವಲಯದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದು ಅನಗತ್ಯವಾಗಿ ರೈತರಿಗೆ ಹಿಂಸೆ ಮತ್ತು ಕಿರುಕುಳ ನೀಡುವುದನ್ನು ಬಿಡಬೇಕು. ಮೂರುವರೆ ವರ್ಷಗಳಿಂದ ಅತಂತ್ರವಾಗಿ ಬದುಕುತ್ತಿರುವವರಿಗೆ ಭೂ ಸ್ವಾಧಿನ ರದ್ದುಪಡಿಸಿ ನೆಮ್ಮದಿಯ ಜೀವನ ಕಲ್ಪಿಸಬೇಕು.