'ರಾಜೀನಾಮೆ ಕೊಟ್ಟಿದ್ದೇನೆ ಎನ್ನುವುದು ಸುಳ್ಳು, ಮಾನನಷ್ಟ ಮೊಕದ್ದಮೆ ಹಾಕ್ತೇನೆ'​​: ಸಚಿವ ನಾಗೇಂದ್ರ ಸ್ಪಷ್ಟನೆ​​..B Nagendra

Minister B Nagendra resignation fake
Minister B Nagendra resignation fake
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರಿಂದ ಒತ್ತಾಯ
  • ಯಾರೋ ಕಿಡಿಗೇಡಿಗಳು ಹಬ್ಬಿಸಿರುವ ವದಂತಿ, ಸುಳ್ಳು ಸುದ್ದಿ ಹಬ್ಬಿಸಿದ್ರೆ ಮಾನನಷ್ಟ ಮೊಕದ್ದಮೆ ಹಾಕ್ತೇನೆ ಎಂದ ಸಚಿವ
  • ಸಚಿವ ಬಿ.ನಾಗೇಂದ್ರ ರಾಜೀನಾಮೆ ಸುದ್ದಿ ಸುಳ್ಳು ಎಂದು ಸ್ಪಷ್ಟನೆ

ಬೆಂಗಳೂರು: ವಾಲ್ಮೀಕಿ ಹಗರಣದ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ತೀವ್ರ ಹೋರಾಟದ ಆ ಬೆನ್ನಲ್ಲೇ ಆವರು ರಿಸೈನ್​ ಮಾಡಿದ್ದಾರೆ ಎನ್ನುವ ಗಾಸಿಪ್ಸ್​ಗೆ ಸದ್ಯ ಸಚಿವರಿಂದಲೇ ಸ್ಪಷ್ಟನೆ ಸಿಕ್ಕಿದೆ.

ರಾಜೀನಾಮೆಗೆ ಸಂಬಂಧಿಸಿದಂತೆ ಹಬ್ಬಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಲಾಗಿದೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ವದಂತಿಯನ್ನು ಹಬ್ಬಿಸಿದ್ದಾರೆ ಎಂದು

ಸಚಿವ ಬಿ.ನಾಗೇಂದ್ರ ಹೇಳಿದರು.

ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ

ನಿನ್ನೆ ಸಿಎಂ ಡಿಕೆ ಶಿವಕುಮಾರ್​ ಅವರು ಕರೆದಿದ್ದ ಜಿಲ್ಲಾ ಶಾಸಕರ ಸಭೆಗೆ ಸಚಿವ ನಾಗೇಂದ್ರ ಗೈರುಹಾಜರಾಗಿದ್ದರು. ತಮ್ಮ ಕ್ಷೇತ್ರದಲ್ಲಿ ಪೂರ್ವ ನಿಗದಿತ ಪ್ರಮುಖ ಕಾರ್ಯಕ್ರಮವಿದ್ದ ಕಾರಣ ಅವರು ಸಿಎಂ ಸಭೆಗೆ ಹೋಗಲು ಸಾಧ್ಯವಾಗಿರಲಿಲ್ಲ.

ಸಭೆಗೆ ಹಾಜರಾಗಲು ಆಗುವುದಿಲ್ಲ ಎಂಬುದರ ಕುರಿತು ಅವರು ಮುಂಚಿತವಾಗಿ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಇದನ್ನೇತಪ್ಪಾಗಿ ಅರ್ಥೈಸಿರುವ ಕಿಡಿಗೇಡಿಗಳು ಸಚಿವರು ರಾಜೀನಾಮೆ ನೀಡಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು.

ಮಾನನಷ್ಟ ಮೊಕದ್ದಮೆ ಎಚ್ಚರಿಕೆ

ರಾಜೀನಾಮೆ ವದಂತಿ ಸಂಪೂರ್ಣ ಅಸತ್ಯವಾಗಿದ್ದು, ಯಾವುದೇ ಆಧಾರವಿಲ್ಲದೆ ರಾಜೀನಾಮೆ ನೀಡುವುದಾಗಿ ಸುದ್ದಿ ಪ್ರಕಟಿಸಿರುವ ಸುದ್ದಿ ವಾಹಿನಿಗಳ ವಿರುದ್ಧ ಕಾನೂನು ಕ್ರಮವಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಚಿವ ಬಿ.ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ರಾಜೀನಾಮೆಗಾಗಿ ಬಿಡದ ಪಟ್ಟು

ದಲಿತರ ಕಲ್ಯಾಣಕ್ಕಾಗಿ ಮೀಸಲಾದ ₹187 ಕೋಟಿ ಹಣ ಕಾಂಗ್ರೆಸ್ ನಾಯಕರ ಪಾಲಾಗಿದೆಯೇ? ಹಾಗಾಗಿಯೇ ಭ್ರಷ್ಟ ಸಚಿವ ಬಿ. ನಾಗೇಂದ್ರ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮದ ಕುರಿತು ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು. ಆರೋಪದ ಗಂಭೀರತೆಯನ್ನು ಅರಿತು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಬದಲು ಅವರನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರದ ನಿಲುವು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಬಿ. ನಾಗೇಂದ್ರ ಅವರ ರಾಜೀನಾಮೆಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂದಿನಿಂದ ಹಗಲು-ರಾತ್ರಿ ಸದನದಲ್ಲೇ ಪ್ರತಿಭಟನೆ ನಡೆಸುತ್ತೇವೆ. ದಲಿತರ, ಬಡವರ ಕಲ್ಯಾಣಕ್ಕಾಗಿ ಮೀಸಲಾದ ಹಣಕ್ಕೆ ನ್ಯಾಯ ಸಿಗುವವರೆಗೂ ಹಾಗೂ ಈ ಅಕ್ರಮದ ಸಂಪೂರ್ಣ ಸತ್ಯ ಹೊರಬರುವವರೆಗೂ ಬಿಜೆಪಿ ಹೋರಾಟ ನಿರಂತರ!

ನಾಗೇಂದ್ರ ರಾಜೀನಾಮೆ ಕೊಡುವವರೆಗೂ — ಹೋರಾಟಕ್ಕೆ ವಿರಾಮವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​ ಅಶೋಕ್​ ಎಕ್ಸ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ, (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net