ಸಾಧಕರನ್ನು ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿ / SARJAPUR
ಸರ್ಜಾಪುರ ಪಟ್ಟಣದ ಟೌನ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ಎಸ್ಸೆಸಸ್ಸೆಲ್ಸಿ ಪರೀೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಆನೇಕಲ್ ತಾಲೂಕಿಗೆ ಕೀರ್ತಿ ತಂದ ಕು. ಸೇವಂತಿ ಹಾಗೂ ಆಕೆಯ ತಂದೆ ಮಹೇಶ್ ಅವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ನ ರೂಪೇಶ್ ಚಂದ್ರ, ಸುಪರ್ಣ ಚಟರ್ಜಿ, ಟೌನ್ ಆಸ್ಪತ್ರೆಯ ಮೂರ್ತಿ ಕುಮಾರ್, ವೆಂಕಟೇಶ್ ಬ್ರೂಸ್ಲಿ, ಮೋಹನ್ ಕುಮಾರ್, ಗಾಯತ್ರಿ, ಯಾಸಿನ್, ನಾರಾಯಣಸ್ವಾಮಿ ಇತರರು ಇದ್ದರು.
ಸರ್ಜಾಪುರ : ಆರೋಗ್ಯವಂತ ಸಮಾಜ ನಿಮಾರ್ಣದ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಟೌನ್ ಆಸ್ಪತ್ರೆ ಮುಖ್ಯಸ ಡಾ. ಪರಮೇಶ್ವರ್ ತಿಳಿಸಿದರು.
ಸರ್ಜಾಪುರ ಪಟ್ಟಣದ ಟೌನ್ ಆಸ್ಪತ್ರೆ ಆವರಣದಲ್ಲಿ ಸೋಮವಾರ ಟೌನ್ ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಮಾಸಿಕ ಮಧುಮೇಹ ಮತ್ತು ಬಂಜೆತನ ನಿವಾರಣಾ ಕುರಿತ ಉಚಿತ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಆರೋಗ್ಯದ ಬಗ್ಗೆ ರ್ನಿಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಮಧುಮೇಹದಂತಹ ಕಾಯಿಲೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಸುಲಭವಾಗಿ ನಿಯಂತ್ರಿಸಬಹುದು. ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆಸ್ಪತ್ರೆ ವತಿಯಿಂದ ನಿರಂತರವಾಗಿ ಉಚಿತ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕಗಳನ್ನು ಪಡೆದು ಆನೇಕಲ್ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ ಕು. ಸೇವಂತಿ ಹಾಗೂ ಆಕೆಯ ಪಾಲಕ ಮಹೇಶ್ ಅವರನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಮುಖ್ಯಸ್ಥೆ ಪೂಜಾ ಚಂದ್ರ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವ ಮೂಲಕ ಜನಸೇವೆಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಜತೆಗೆ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯವೂ ಸಮಾನವಾಗಿ ನಡೆಯುತ್ತಿದೆ ಎಂದರು.
ಶಿಬಿರದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಮಧುಮೇಹ, ಬಂಜೆತನ ಸಮಸ್ಯೆ, ಆಹಾರ ಪದ್ಧತಿ, ಜೀವನಶೈಲಿ ಹಾಗೂ ಆರೋಗ್ಯಕರ ಜೀವನ ನಡೆಸುವ ಕುರಿತು ವೈದ್ಯರು ಸಮಗ್ರ ಮಾಹಿತಿ ನೀಡಿದರು.