ಹೃದಯ ಆರೈಕೆ ಸೇವೆಯನ್ನು ಬೆಂಗಳೂರಿನ ಪಶ್ಚಿಮ ಭಾಗದ ಜನರಿಗೂ ಒದಗಿಸಲು ಉತ್ತಮ ಹೆಜ್ಜೆಯಾಗಿದೆ. ಗೋವಿಂದರಾಜನಗರದಲ್ಲಿರುವ ಜಿಬಿಎಯ ಅಸ್ತಿತ್ವದಲ್ಲಿರುವ ಮಲ್ಟಿಸ್ಪೆಷಾಲಿಟಿ ಕಟ್ಟಡದಲ್ಲಿ ಸ್ಥಾಪಿಸಲಾಗುವ ಹೊಸ ಘಟಕವು ವಿಜಯನಗರ, ರಾಜಾಜಿನಗರ, ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಪೀಣ್ಯ ಮತ್ತು ಬೆಂಗಳೂರು ಗ್ರಾಮಾಂತರ ನಿವಾಸಿಗಳಿಗೆ ಹಾಗೂ ರಾಮನಗರ, ಮಂಡ್ಯ, ತುಮಕೂರು ಮತ್ತು ಹಾಸನ ಜಿಲ್ಲೆಗಳ ರೋಗಿಗಳಿಗೆ ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದರು.