ಜಿಬಿಎಸ್ ಕಾಯಿಲೆಗೆ ಆಯುಷ್ಮಾನ್ ನಲ್ಲಿ ಚಿಕಿತ್ಸೆ

ಗಿಲೆನ್ ಬಾರಿ ಸಿಂಡ್ರೋಮ್
ಗಿಲೆನ್ ಬಾರಿ ಸಿಂಡ್ರೋಮ್
Published on

ಪ್ರಮುಖ ಮುಖ್ಯಾಂಶಗಳು

  • * ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸುತ್ತೋಲೆ
  • * ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್ (ಐವಿಐಜಿ) ಚಿಕಿತ್ಸೆ ಲಭ್ಯ
ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ಕಾಯಿಲೆಗೆ ಲಭ್ಯವಿರುವ ಚಿಕಿತ್ಸೆಯನ್ನು ಸೇರ್ಪಡೆಗೊಳಿಸಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ.
ಗೀಲನ್ ಬಾ ಸಿಟ್ರೋಮ್ ನರಮಂಡಲಕ್ಕೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಇದಕ್ಕೆ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್ (ಐವಿಐಜಿ) ಚಿಕಿತ್ಸೆ ಲಭ್ಯವಿದೆ. ಆದರೆ ಈ ಚಿಕಿತ್ಸೆ ದುಬಾರಿಯಾಗಿರುವ ಕಾರಣ ಇದನ್ನು ಯೋಜನೆಯಡಿ ತರಲಾಗಿದ್ದು, ಪ್ರತಿ ರೋಗಿಗೆ ಗರಿಷ್ಠ 2 ಲಕ್ಷ ದವರೆಗೆ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಔಷಧದ ದರವನ್ನು ಪ್ರತಿ ಗ್ರಾಂಗೆ 2 ಸಾವಿರ ರೂ. ನಿಗದಿಪಡಿಸಲಾಗಿದೆ. ರೋಗಿಯ ತೂಕದ ಆಧಾರದ ಮೇಲೆ ಔಷಧ ನೀಡುವಂತೆ ಸೂಚಿಸಲಾಗಿದೆ.
ಈ ಚಿಕಿತ್ಸಾ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net