ಕೋಲಾರ ಜೆಡಿಎಸ್ ಗೆ ಜಿಲ್ಲಾಧ್ಯಕ್ಷರ ಬದಲಾವಣೆ ಮುಂದು

ಸಿ.ಎಂ.ಆರ್ ಶ್ರೀನಾಥ್, ಜೆಡಿಎಸ್ ಮುಖಂಡರು. ರವರ ಭಾವಚಿತ್ರ
ಸಿ.ಎಂ.ಆರ್ ಶ್ರೀನಾಥ್, ಜೆಡಿಎಸ್ ಮುಖಂಡರು. ರವರ ಭಾವಚಿತ್ರ
Published on
ವಿಜಯವಾಣಿ ಸುದ್ದಿಜಾಲ ಕೋಲಾರ
ಎನ್.ಮುನಿವೆಂಕಟೇಗೌಡ
ರಾಜ್ಯದ ಎಲ್ಲಾ ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರುಗಳ ಬದಲಾವಣೆಗೆ ಬುಧವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕೋಲಾರ ಜಿಲ್ಲೆಯ ಜಿಲ್ಲಾ ಜೆಡಿಎಸ್ ಅಧ್ಯಕ್ಷರನ್ನು ಬದಲಾವಣೆಯ ಬಗ್ಗೆ ಚರ್ಚಿಸಲಾಗಿದ್ದು, ಕೋಲಾರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಸಿ.ಎಂ.ಆರ್ ಶ್ರೀನಾಥ್ ಹೆಸರು ಮುನ್ನಲೆಗೆ ಬಂದಿದೆ.
ಕೋಲಾರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಜಿಲ್ಲೆಯಲ್ಲಿ ಬಹು ದಿನಗಳಿಂದ ಕೂಗು ಕೇಳಿಬಂದಿತ್ತು. ಹಾಲಿ ಅಧ್ಯಕ್ಷ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿಯವರು ಅಧ್ಯಕ್ಷರ ಸ್ಥಾನವನ್ನು ಬಿಟ್ಟುಕೊಡುವ ಬಗ್ಗೆ ಹೇಳಿದ್ದರು. ಜಿಲ್ಲೆಯಿಂದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸಮೃದ್ದಿ ಮಂಜುನಾಥ್, ಮುಳಬಾಗಿಲು ಆನಂದರೆಡ್ಡಿ ಮತ್ತು ಸಿ.ಎಂ.ಆರ್ ಶ್ರೀನಾಥ್ ಹೆಸರು ಮುನ್ನಲೆಗೆ ಬಂದಿತ್ತು.
ಬೆAಗಳೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜೆಡಿಎಸ್ ಅಧ್ಯಕ್ಷರ ಬದಲಾವಣೆಗೆ ನಿರ್ಧರಿಸಲಾಗಿದ್ದು, ಕೋಲಾರ ಜಿಲ್ಲೆಯ ಅಧ್ಯಕ್ಷರಾದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿಯವರನ್ನು ಬದಲಾಯಿಸಿ ಬೇರೆಯವರನ್ನು ಆಯ್ಕೆ ಮಾಡಲು ತೀರ್ಮಾನಿಸಲಾದ ಸಂದರ್ಭದಲ್ಲಿ ಸಿ.ಎಂ.ಆರ್ ಶ್ರೀನಾಥ್ ಮುನ್ನಲೆಗೆ ಬಂದಿತು ಎನ್ನಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದ್ದು ಕಾರ್ಯಕರ್ತರ ಪಡೆ ಹೆಚ್ಚಾಗಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಸಾಧ್ಯವಾಗದಿದ್ದರೂ ಕೇವಲ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಶಾಸಕರು ಆಯ್ಕೆಯಾಗಿದ್ದು, ಇನ್ನುಳಿದ ಕ್ಷೇತ್ರಗಳಲ್ಲಿ ಮತಗಳಿಕೆ ಆಧಾರದ ಮೇಲೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹೆಚ್ಚಾಗಿದ್ದಾರೆ ಮತ್ತು ಕೋಲಾರದಲ್ಲಿ ಪರಾಜಿತ ಅಭ್ಯರ್ಥಿ ಸಿ.ಎಂ.ಆರ್ ಶ್ರೀನಾಥ್ ನೇತೃತ್ವದಲ್ಲಿ ಹೆಚ್ಚು ಕಾರ್ಯಕರ್ತರ ಪಡೆ ಇರುವುದನ್ನು ಮನಗಂಡಿರುವ ರಾಜ್ಯ ನಾಯಕರು ಸಿ.ಎಂ.ಆರ್ ಶ್ರೀನಾಥ್ ರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷವನ್ನು ಬಲಿಷ್ಠಗೊಳಿಸುತ್ತಾರೆ ಎಂದು ತೀರ್ಮಾನಸಿದ್ದಾರೆ ಎನ್ನಲಾಗಿದೆ.
ಜಿಲ್ಲೆಯ ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ ಮತ್ತು ಬಂಗಾರಪೇಟೆಯಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದ್ದು, ಕೆಜಿಎಫ್ ಮತ್ತು ಮಾಲೂರಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕಾಗಿರುವುದರಿಂದ ಜಿಲ್ಲೆಗೆ ಬಲಿಷ್ಠ ನಾಯಕರ ಅವಶ್ಯಕತೆಯನ್ನು ಮನಗಂಡಿರುವ ರಾಜ್ಯ ನಾಯಕರು ಸಿ.ಎಂ.ಆರ್ ಶ್ರೀನಾಥ್ ರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ೨೦೨೮ ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಕೋಟ್
ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಯೋಚನೆಯಂತೆ ರಾಜ್ಯದಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ ೧೪ರ ಒಳಗೆ ಸಂಘಟನಾತ್ಮಕ ಕ್ರಮಗಳನ್ನು ಕೈಗೊಂಡು ರಾಜ್ಯವಿಡೀ ಜಿಲ್ಲಾವಾರು ಪ್ರವಾಸ ನಡೆಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲಾಗುವುದು.
-ಜೆ.ಕೆ.ಕೃಷ್ಣಾರೆಡ್ಡಿ, ಕೋರ್ ಕಮಿಟಿ ಅಧ್ಯಕ್ಷ.
ಕೋಟ್
ಈಗಿನ ಜಿಲ್ಲಾಧ್ಯಕ್ಷರು ಪಕ್ಷ ನಿಷ್ಟರಾಗಿದ್ದು ಪಕ್ಷಕ್ಕಾಗಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಬದಲಾವಣೆಗೆ ರಾಜ್ಯ ನಾಯಕರು ಚರ್ಚಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ವಿಷಯ ತಿಳಿದುಕೊಂಡು ಈ ಬಗ್ಗೆ ನಾನು ಮಾತನಾಡುತ್ತೇನೆ. ಅಲ್ಲಿಯ ತನಕ ನಾನು ಯಾವುದೆ ಪ್ರತಿಕ್ರಿಯೆ ನೀಡುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net