ಜೆಡಿಎಸ್ ರಜತ ಮಹೋತ್ಸವ

ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಸ್ತು ಪ್ರದರ್ಶನ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಸ್ತು ಪ್ರದರ್ಶನ
ಬೆಂಗಳೂರು:
ಜೆಡಿಎಸ್ ರಜತ ಮಹೋತ್ಸವ ಪ್ರಯುಕ್ತ ನ.21 ಮತ್ತು 22 ರಂದು ಜೆಪಿ ಭವನದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನಿಯಾಗಿ ಅಧಿಕಾರ ನಡೆಸಿದ ಸಂದರ್ಭದಲ್ಲಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ವಸ್ತು ಪ್ರದರ್ಶನವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಸಾಲ ಮನ್ನಾ, ಲಾಟರಿ ನಿಷೇಧದಿಂದ ಹಿಡಿದ ಗ್ರಾಮ ವಾಸ್ತವ್ಯ ತನಕ ಹತ್ತು ಹಲವು ಯೋಜನೆಗಳನ್ನು ವಸ್ತು ಪ್ರದರ್ಶನಲ್ಲಿ ಚಿತ್ರಗಳ ಸಹಿತ ಪ್ರದರ್ಶನ ಮಾಡಲು ಯೋಜಿಸಲಾಗಿದೆ.
ನ.21ರಂದು ಸಂಜೆ 4.30ಕ್ಕೆ ಜೆಡಿಎಸ್ ಸೇವಾದಳದಿಂದ ಧ್ವಜಾರೋಹಣ, 6 ಗಂಟೆಗೆ ಬೇರೆ ರಾಜ್ಯಗಳಿಂದ ಬಂದ ಪ್ರತಿನಿಧಿಗಳ ಸಮಾವೇಶ, 22 ರಂದು ಬೆಳಿಗ್ಗೆ 11 ಗಂಟೆಗೆ ರಜತ ಮಹೋತ್ಸವ ಉದ್ಘಾಟನೆ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕನ್ನಡ ನೆಲದಲ್ಲಿ ಹುಟ್ಟಿದ ಪ್ರಾದೇಶಕ ಪಕ್ಷವೊಂದು 25 ವಸಂತಗಳನ್ನು ಕಾಣುತ್ತಿರುವುದು ಕನ್ನಡಿಗರ ಪಾಲಿಗೆ ಸಂಭ್ರಮ ಮತ್ತು ಸಡಗರದ ಸಂಗತಿ. ತಮಿಳುನಾಡು, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಾದೇಶಕ ಪಕ್ಷಗಳದ್ದೆ ಪಾರುಪತ್ಯ ಇದೆ. ಅದೇ ಮಾದರಿಯಲ್ಲಿ ಜೆಡಿಎಸ್ ಸಂಘಟನೆ ಮಾಡಲಾಗುವುದು ಎಂದು ಬಾಬು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ನಗರ ಘಟಕ ಅಧ್ಯಕ್ಷ ರಮೇಶ್ ಬಾಬು, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹಾಜರಿದ್ದರು.

*ಡಿ.1ರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜೆಡಿಎಸ್ ರಜತ ಮಹೋತ್ಸವ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net