ಉದ್ಯೋಗ ಕಲ್ಪಿಸಲು ಜಾಬ್ ಕಾರ್ಡ್ ಮೇಳ

ತಾಳಿಕೋಟೆ ತಾಲೂಕಿನ ಬ.ಸಾಲವಡಗಿ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಒ ಅನುಸೂಯಾ ಚಲವಾದಿ ಚಾಲನೆ ನೀಡಿದರು. ಪಿ.ಎಸ್. ಕಸನಕ್ಕಿ, ಅನೀಲ ಬಿರಾದಾರ, ಮಲಕಪ್ಪ, ಎಸ್.ಜಿ. ಅಲ್ಲಾಪುರ  ಸೇರಿ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ಅನುಸೂಯಾ ಚಲವಾದಿ ಹೇಳಿಕೆ
  • ಸೆ.15ರವರೆಗೆ ಅಭಿಯಾನ

ತಾಳಿಕೋಟೆ: ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ಉದ್ಯೋಗ ಖಾತರಿ ಹಾಗೂ ಜೀವನೋಪಾಯ ಅಭಿಯಾನ (ಗ್ರಾಮೀಣ) (ವಿಬಿ-ಜಿ ರಾಮ್-ಜಿ) ಯೋಜನೆಯಡಿ ಆ.15ರಿಂದ ಸೆ.15ರವರೆಗೆ ತಾಲೂಕಿನ ಎಲ್ಲಾ ಗ್ರಾ.ಪಂ.ಗಳಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಅನುಸೂಯಾ ಚಲವಾದಿ ಹೇಳಿದರು.

ತಾಲೂಕಿನ ಬ.ಸಾಲವಡಗಿ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗ ಒದಗಿಸಿ, ಆರ್ಥಿಕ ಸ್ವಾವಲಂಬನೆ ಹಾಗೂ ಜೀವನೋಪಾಯ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಜಾಬ್ ಕಾರ್ಡ್ ಮೇಳ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಸಹಾಯಕ ನಿರ್ದೇಶಕ ಪಿ.ಎಸ್. ಕಸನಕ್ಕಿ ಮಾತನಾಡಿ, ಜಾಬ್ ಕಾರ್ಡ್ ಮೇಳದ ಮೂಲಕ ಗ್ರಾಮೀಣ ಜನರ ಜೀವನೋಪಾಯ ಭದ್ರತೆಗಾಗಿ ಉದ್ಯೋಗ ಸೃಜನೆ, ಬರ ನಿರ್ವಹಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ ಹಾಗೂ ಕೂಲಿಕಾರರ ವಲಸೆ ತಡೆಯುವ ನಿಟ್ಟಿನಲ್ಲಿ ಯೋಜನೆ ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net