5927 ಗ್ರಾಪಂಗಳಲ್ಲಿ ಜಾಬ್ ಕಾರ್ಡ್ ಮೇಳ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ ಬಿ. ಖಂಡ್ರೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ ಬಿ. ಖಂಡ್ರೆ
Published on
ಬೆಂಗಳೂರು: ವಿಬಿಜಿ-ರಾಮ್‌ಜಿ ಯೋಜನೆಯಡಿ ದುಡಿವ ಕೈಗಳಿಗೆ ಕೆಲಸ ನೀಡಲು ರಾಜ್ಯದ 5,927 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
ಹೊಸದಾಗಿ ಉದ್ಯೋಗ ಬಯಸುವ ಗ್ರಾಮೀಣ ಭಾಗದ ಪರಿಶಿಷ್ಟರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳೆಯರು, ಭೂ ರಹಿತ ಕೂಲಿಕಾರ್ಮಿಕರಿಗೆ ಮೇಳದ ಮೂಲಕ ಕಾರ್ಡ್ ವಿತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿಬಿಜಿ ರಾಮ್ ಜಿ ಅಡಿ ಕೇಂದ್ರದ ಶೇ.60 ಅನುದಾನ 1,700 ಕೋಟಿ ರೂ. ಹಾಗೂ ರಾಜ್ಯದ ಶೇ.40 ಅನುದಾನ 1,200 ಕೋಟಿ ರೂ. ಸೇರಿ ಒಟ್ಟು 2,900 ಕೋಟಿ ರೂ. ಒದಗಿಸಲಾಗಿದೆ. ಈ ಪೈಕಿ ಕೂಲಿ ನೀಡಲು ಗ್ರಾಪಂಗಳಿಗೆ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಹಣದ ಕೊರತೆ ಇಲ್ಲದಿದ್ದರೂ ಕೆಲ ಗ್ರಾಪಂಗಳಲ್ಲಿ ಯೋಜನೆಯ ಅನುಷ್ಠಾನ ತೃಪ್ತಿದಾಯಕ ಇಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಗಂಭೀರವಾಗಿ ಪರಿಗಣಿಸಿದ್ದೇವೆ. ಕೂಡಲೇ ಗ್ರಾಮೀಣರಿಗೆ ಉದ್ಯೋಗ ಒದಗಿಸಲು ಸಚಿವರು ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net