ಯುವಕರಿಗೆ ಉದ್ಯೋಗ ಮೇಳ ವರದಾನ / NELAMANGAL

ನೆಲಮಂಗಲದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಆಯೋಜಿಸಿದ್ದ ಬೃಹತ್​ ಉದ್ಯೋಗ ಮೇಳವನ್ನು ಶ್ರೀ ಸಿದ್ದಲಿಂಗಸ್ವಾಮೀಜಿ ಉದ್ಘಾಟಿಸಿದರು. ಪ್ರಾಧ್ಯಾಪಕರಾದ ವನಜಾಕ್ಷಿ, ಜಯಲತಾ, ತಾರಾ, ಸೌಮ್ಯಶ್ರೀ, ನವೀನ್​, ಸುಷ್ಮಾ, ದೀಕ್ಷಿತ್​, ಗೋವಿಂದರಾಜು, ಮೋಹನ್​, ಹೇಮಂತ್​ ಕುಮಾರ್​ ಇದ್ದರು.

Published on
ನೆಲಮಂಗಲ : ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳಗಳು ವರದಾನವಾಗಿವೆ ಎಂದು ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಹೇಳಿದರು.
ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಶ್ರೀ ಬಸವೇಶ್ವರ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಮ್ಯಾಜಿಕ್​ ಬಸ್​ ಇಂಡಿಯಾ ಫೌಂಡೇಷನ್​ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್​ ಉದ್ಯೋಗ ಮೇಳದಲ್ಲಿ ಮಾತನಾಡಿದರು.
ದೇಶದಲ್ಲಿ ನಿರುದ್ಯೋಗಿ ಪದವೀಧರರ ಸಂಖ್ಯೆ ಹೆಚ್ಚುತ್ತಿದೆ. ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಳ್ಳಬೇಕು. ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ದೇಶದ ಪ್ರಗತಿ ಹಾಗೂ ಅಭಿವೃದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಜನರಿಗೆ ಹೆಚ್ಚು ಲಾಭ ದೊರೆಯಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗ ಪಡೆಯಬಹುದು ಎಂದರು.
ಪ್ರಾಂಶುಪಾಲ ಡಾ.ರುದ್ರಮಹೇಶ್​ ಮಾತನಾಡಿ, ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಸುತ್ತಿದ್ದು, 30 ವಿವಿಧ ಕಂಪನಿಗಳು, ನಗರದ 5 ಪದವಿ ಕಾಲೇಜಿನ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net