ಜೂ. 2ರಂದು ಉದ್ಯೋಗ ಮೇಳ

ಕೃಷ್ಣನಾಯ್ಕ, ಶಾಸಕ
ಕೃಷ್ಣನಾಯ್ಕ, ಶಾಸಕ
Published on
ಹೂವಿನಹಡಗಲಿ: ಸ್ಥಳೀಯ ಜಿಬಿಆರ್ ಮತ್ತು ಎಸ್‌ಆರ್‌ಎಂಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಜೂ. 2ರಂದು ಉದ್ಯೋಗ ಮೇಳ ಹಾಗೂ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಲಾಗಿದೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು. 
ಶಾಸಕರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ 100 ಕಂಪನಿಗಳು ಭಾಗವಹಿಸಲಿದ್ದು, ಕ್ಷೇತ್ರದ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲಾಗುವುದು. ಜಿಬಿಆರ್ ಕಾಲೇಜಿನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 
ಎಸ್‌ಆರ್‌ಎಂಪಿಪಿ ಪದವಿ ಕಾಲೇಜಿನಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕುರಿತು ಮಾಹಿತಿ ಮತ್ತು ತರಬೇತಿ ನೀಡಲಾಗುವುದು ಎಂದರು. 
ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಶಶಿಧರ ಹಣ್ಣಿ, ಪುರಸಭೆ ಮಾಜಿ ಸದಸ್ಯ ಮಂಜುನಾಥ, ಮಹಾಂತೇಶ ತಳವಾರ್, ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರಡ್ಡಿ, ಪ್ರಮುಖರಾದ ಎಚ್.ಪೂಜಪ್ಪ, ವಾರದ ಗೌಸ್ ಮೋಹಿದ್ದೀನ್ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net