ಮತದಾರರ ಪಟ್ಟಿ ಪರಿಷ್ಕರಣೆಗೆ ಕೈಜೋಡಿಸಿ

ಕಲಬುರಗಿ ಜಗತ್​ ವೃತ್ತದಲ್ಲಿ ಜಿಲ್ಲಾ ಸ್ವೀಪ್​ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾಕ್ಕೆ ಚಾಲನೆ ನೀಡಿ ಜಿಪಂ ಸಿಇಒ ರಾಹುಲ್​ ಸಂಕನೂರ ಮಾತನಾಡಿದರು. ಜಗದೇವಪ್ಪ, ಸೂರ್ಯಕಾಂತ, ಸುರೇಶ ಅಕ್ಕಣ್ಣ, ಚೆನ್ನಪ್ಪ, ಮಾನಪ್ಪ ಕಟ್ಟಿಮನಿ ಇತರರಿದ್ದರು.
ಕಲಬುರಗಿ ಜಗತ್​ ವೃತ್ತದಲ್ಲಿ ಜಿಲ್ಲಾ ಸ್ವೀಪ್​ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾಕ್ಕೆ ಚಾಲನೆ ನೀಡಿ ಜಿಪಂ ಸಿಇಒ ರಾಹುಲ್​ ಸಂಕನೂರ ಮಾತನಾಡಿದರು. ಜಗದೇವಪ್ಪ, ಸೂರ್ಯಕಾಂತ, ಸುರೇಶ ಅಕ್ಕಣ್ಣ, ಚೆನ್ನಪ್ಪ, ಮಾನಪ್ಪ ಕಟ್ಟಿಮನಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಸಿಇಒ ರಾಹುಲ್​ ಸಂಕನೂರ ಮನವಿ
  • ಕಲಬುರಗಿಯಲ್ಲಿ ಬೃಹತ್​ ಜಾಗೃತಿ ಅಭಿಯಾನ
ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್​) ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್​ ಸಂಕನೂರ ಹೇಳಿದರು.
ಜಗತ್​ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್​ ಸಮಿತಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಜೂ.30ರಿಂದ ಜು.30ರವರೆಗೆ ನಡೆಯಲಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಮತ್ತು ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಸ್ವೀಪ್​ ನೋಡಲ್​ ಅಧ್ಯಕ್ಷರು ಆದ ಜಿಪಂ ಯೋಜನಾ ನಿರ್ದೇಶಕ ಜಗದೇವಪ್ಪ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಅಧಿಕಾರಿ ಸೂರ್ಯಕಾಂತ, ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಅಕ್ಕಣ್ಣ, ಜಿಪಂ ಉಪಕಾರ್ಯದರ್ಶಿ ಚೆನ್ನಪ್ಪ, ತಾಪಂ ಇಒ ಮಾನಪ್ಪ ಕಟ್ಟಿಮನಿ ಇತರರಿದ್ದರು.
"

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳ ಬಗ್ಗೆ ಎಚ್ಚರಿಕೆ ಅಗತ್ಯ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಮಾಡುವುದು, ಅಗತ್ಯವಿದ್ದಲ್ಲಿ ತಿದ್ದುಪಡಿಯನ್ನೂ ಮಾಡಿಕೊಳ್ಳಬಹುದಾಗಿದೆ.

— > ರಾಹುಲ್​ ಸಂಕನೂರ, ಜಿಪಂ ಸಿಇಒ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net