ಬಾಲಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಕೈಜೋಡಿಸಿ

ಯಾದಗಿರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್​.ಜೆ. ಉದ್ಘಾಟಿಸಿದರು. ಹಿರಿಯ ಸಿವಿಲ್​ ನ್ಯಾಯಾಧೀಶ ಮರಿಯಪ್ಪ, ಅಪರ ಡಿಸಿ ರಮೇಶ ಕೋಲಾರ, ಶ್ರೀಹರಿ ದೇಶಪಾಂಡೆ, ಹೆಚ್ಚುವರಿ ಎಸ್​ಪಿ ಧರಣೇಶ ಇತರರಿದ್ದರು.
ಯಾದಗಿರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್​.ಜೆ. ಉದ್ಘಾಟಿಸಿದರು. ಹಿರಿಯ ಸಿವಿಲ್​ ನ್ಯಾಯಾಧೀಶ ಮರಿಯಪ್ಪ, ಅಪರ ಡಿಸಿ ರಮೇಶ ಕೋಲಾರ, ಶ್ರೀಹರಿ ದೇಶಪಾಂಡೆ, ಹೆಚ್ಚುವರಿ ಎಸ್​ಪಿ ಧರಣೇಶ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಕರೆ
  • ವಿವಿಧ ಇಲಾಖೆಗಳಿಂದ ಕಾರ್ಯಕ್ರಮ ಆಯೋಜನೆ
ಯಾದಗಿರಿ: ಸಮಾಜದಲ್ಲಿರುವ ಬಾಲಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರೂ ಮುಂದಾಗುವಂತೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್​.ಜೆ. ಅವರು ಕರೆ ನೀಡಿದರು.
ನಗರದ ಪದವಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ, ಜಿಪಂ, ಕಾರ್ಮಿಕ, ಪೋಲಿಸ್​ ಹಾಗೂ ವಿವಿಧ ಇಲಾಖೆ ಮತ್ತು ವಿವಿಧ ಸಂ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಶಾಸನಾತ್ಮಕವಾಗಿ ಹಾಗೂ ಕಾನೂನಾತ್ಮಕವಾಗಿ ಬಾಲ ಕಾರ್ಮಿಕ ಪದ್ಧತಿಗೆ ಶಿೆ ಸಹ ಇದೆ. ಈ ಹಿನ್ನೆಲೆಯಲ್ಲಿ ಬಾಲಕಾರ್ಮಿಕರನ್ನಾಗಿ ಮಕ್ಕಳನ್ನು ದುಡಿಸಿಕೊಳ್ಳುವ ಪಾಲಕರಲ್ಲಿ ಸೂಕ್ತ ಅರಿವು ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಮಕ್ಕಳು ಮನೆಗಳಲ್ಲಿ ಕೆಲಸ ಮಾಡುವುದು ಹಿರಿಯರಿಗೆ ಗೌರವ ನೀಡಿದಂತೆ. ಆದರೆ 14 ವರ್ಷದೊಳಗಿನ ಬಾಲ ಕಾರ್ಮಿಕರು ಹಾಗೂ 14ರಿಂದ 18 ವರ್ಷದೊಳಗಿನ ಕಿಶೋರ್​ ಮಕ್ಕಳನ್ನು ಬಾಲ ಕಾರ್ಮಿಕತೆಗೆ ಬಳಸುವುದು ಅಪರಾಧ ಹಾಗೂ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಸಹ ಇದೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ, ಮಕ್ಕಳು ಜೀವನದಲ್ಲಿ ಆಕಾಶದೆತ್ತರದ ಗುರಿ ಹೊಂದಬೇಕು. ಸ್ವಾಮಿ ವಿವೇಕಾನಂದ, ಎಪಿಜೆ ಅಬ್ದುಲ್​ ಕಲಾಂ ಅವರಂತಹ ಗಣ್ಯರ ಜೀವನಸಾಧನೆ ತಿಳಿದು, ದೇಶದ ಅಭಿವೃದ್ಧಿಯಲ್ಲಿ ನೆರವಾಗಬೇಕು. ಮಕ್ಕಳು ದೇಶದ ಆಸ್ತಿ, ಮಾನವೀಯತೆ ದೃಷ್ಟಿಯಿಂದ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳದಂತೆ ನೆರೆ ಹೊರೆಯವರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಹಿರಿಯ ಸಿವಿಲ್​ ನ್ಯಾಯಾಧೀಶ ಮರಿಯಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಕಾರ್ಮಿಕ ಇಲಾಖೆ ಉಪನಿರ್ದೇಶಕ ಶ್ರೀಹರಿ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೆಚ್ಚುವರಿ ಎಸ್​ಪಿ ಧರಣೇಶ, ಅಧಿಕಾರಿಗಳಾದ ತಿಪ್ಪಣ್ಣ ಸಿರಸಗಿ, ದಿನೇಶಕುಮಾರ, ಸಾವಿತ್ರಿ ಗುಗ್ಗರಿ, ಡಾನ್​ ಬಾಸ್ಕೋ ಸಂಸ್ಥೆ ನಿರ್ದೇಶಕ ವಾಸು ಫ್ರಾನ್ಸಿಸ್​, ವರ್ಲ್ಡ್​ ವಿಜಿಯನ್​ ಸಂಸ್ಥೆ ಅನಿಲ ಸೇರಿ ಇತರರಿದ್ದರು.
ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್​ ಪಟೇಲ್​ ಸ್ವಾಗತಿಸಿದರು. ಸಂತೋಷ್​ ಕುಮಾರ್​ ಕಾರ್ಯಕ್ರಮ ನಿರೂಪಿಸಿದರು. ಚರ್ಚಾಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಬೆಳಗ್ಗೆ ಬಾಲಕಾರ್ಮಿಕ ವಿರೋಧಿ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್​ ನ್ಯಾಯಾಧೀಶರು ಮರಿಯಪ್ಪ ಚಾಲನೆ ನೀಡಿದರು.
"

ಸಾಮಾನ್ಯ ಮಕ್ಕಳಂತೆ ಬಾಲಕಾರ್ಮಿಕ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಮಕ್ಕಳು ಬಾಲ ಕಾರ್ಮಿಕರಾಗಿ ಉಳಿಯುವುದರಿಂದ ದೇಶದ ಅಭಿವೃದ್ಧಿಗೆ ಮಾರಕ. ಅದರಂತೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೂ ತೊಂದರೆಯಾಗುವದರಿಂದ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನೆರವಾಗಬೇಕು.

— ಮರುಳಸಿದ್ದಾರಾಧ್ಯ ಎಚ್​.ಜೆ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು, ಯಾದಗಿರಿ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net