ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಎಚ್. ಕೆ.ಜವರೇಗೌಡರಂತಹ ಹಿರಿಯರು ಇಂತಹವರಿಗೆ ಟಿಕೆಟ್ ಕೊಡಬಾರದು ಎಂದು ಹೇಳಿದ್ದರು. ಅವರ ಮಾತು ಕೇಳದೇ ಮೂರು ಬಾರಿ ಅವಕಾಶ ಕೊಟ್ಟು ದೊಡ್ಡ ತಪ್ಪು ಮಾಡಿದೆ ಎಂದರು.
ಜಿಲ್ಲೆಗೆ ಐಐಟಿ ತರಲು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಇಂತಹ ಮಹತ್ವದ ಕೆಲಸಕ್ಕೆ ನಿಮ್ಮ ಆಶೀರ್ವಾದ ಅಗತ್ಯವಿದೆ. ಮುಂದೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದರು.
ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ ಮಾತನಾಡಿ, ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಕೆಲಸ ಮಾಡೋಣ ಎಂದು ಹೇಳಿದರು.
ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಮಾತನಾಡಿ, ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಜಿಲ್ಲೆಯಲ್ಲಿ ಎಚ್.ಡಿ.ರೇವಣ್ಣ ಅವರದ್ದೇ ಆಡಳಿತ ಎಂಬುದನ್ನು ಮರೆಯಬಾರದು. ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಸಮಾವೇಶಕ್ಕೆ ತೆರಳೋಣ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶೇಖರಪ್ಪ, ಮಾಜಿ ಉಪಾಧ್ಯಕ್ಷ ಬಂಡಿಗೌಡರ ರಾಜಣ್ಣ ಇತರರು ಮಾತನಾಡಿದರು.
ಜಿಪಂ ಮಾಜಿ ಸದಸ್ಯ ಬಾಣಾವರ ಅಶೋಕ್, ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಗಂಗಾಧರ್, ಜನತಾ ಬಜಾರ್ ಅಧ್ಯಕ್ಷ ಗಂಡಸಿ ಮಂಜಣ್ಣ, ನಗರಸಭೆ ಮಾಜಿ ಅಧ್ಯಕ್ಷ ಸಿ.ಗಿರೀಶ್, ವಕೀಲ ವಿವೇಕ್, ಬಿ.ಜೆ.ನಿರಂಜನ್,ಪುಟ್ಟಸ್ವಾಮಿ, ಹುಲ್ಲೇಕೆರೆ ಕುಮಾರ್, ಹರ್ಷವರ್ಧನ್, ಮಂಜಣ್ಣ, ಕೆಂಕೆರೆ ಕೇಶವಮೂರ್ತಿ, ಸತೀಶ್, ಲಾಳನಕೆರೆ ಯೋಗೀಶ್, ಜಾಕೀರ್, ಇಮ್ರಾನ್, ಮುನ್ನಾ, ನಾಜಿಮ್, ಇತರರು ಇದ್ದರು.