ನಗರದಲ್ಲಿ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಭವನದಲ್ಲಿ ಈಚೆಗೆ ಕರ್ನಾಟಕ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿ, ಯಾವುದು ತಪ್ಪು, ಯಾವುದು ಸರಿ, ಯಾವುದನ್ನು ಬೆಳೆಸಬೇಕು, ಯಾವುದನ್ನು ತಡೆಯಬೇಕು ಎಂದು ವಿಶ್ಲೇಷಿಸುವ ಮಹತ್ವದ ಹೊಣೆ ಪತ್ರಕರ್ತರ ಮೇಲಿದೆ ಎಂದರು.