ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ

ಅತ್ಯಾಚಾರಿಗೆ ಶಿಕ್ಷೆ ಪ್ರಕಟ
ಅತ್ಯಾಚಾರಿಗೆ ಶಿಕ್ಷೆ ಪ್ರಕಟ
Published on

ಪ್ರಮುಖ ಮುಖ್ಯಾಂಶಗಳು

  • ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ
  • ಅಪರಾಧಿಯು ಸಂಕೇಶ್ವರ ಪಟ್ಟಣದ ನಿವಾಸಿ
  • ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ ಅಪರಾಧಿ
  • ೨೦೨೪ರಲ್ಲಿ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು
ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಎಸ್.ಎಮ್ ಅವಜಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪಿಸಿದ ಶಿಕ್ಷೆ ವಿಧಿಸಿ ತೀರ್ಪು ಹೇಳಿದ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶ ಹೊರಡಿಸಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net