ನ್ಯಾ.ಬಿ.ವೀರಪ್ಪ ಅವರು ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆಯೇ ಹೊರತು ಬಿಜೆಪಿ ಬಗ್ಗೆ ಹೇಳಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,, ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ 63 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಅವರು ಹಿಂದಿನ ಬಿಜೆಪಿ ಸರ್ಕಾರ ಎಂದು ಎಲ್ಲೂ ಉಲ್ಲೇಖಿಸಿಲ್ಲ. 2019 ಎಂದು ಪ್ರಸ್ತಾಪ ಮಾಡಿಲ್ಲ ಎಂದರು.