ಜೂನ್ 12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ನಿರ್ಧಾರ

,
,
Published on
ಕಲಬುರಗಿ : ಜಿಲ್ಲೆಯಾದ್ಯಂತ ಮುಂಬರುವ ಜೂನ್ 12 ರಂದು "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ"ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಯಪ್ಪ ಹುಣಸಗಿ ಅವರು ಮಾತನಾಡಿ, ಅಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಭಾಷಣ, ಚಿತ್ರಕಲೆ, ರಸಪ್ರಶ್ನೆ, ನಾಟಕ, ಪ್ರಬಂಧ ಸ್ಪರ್ಧೆ ಆಯೋಜಿಸಬೇಕು. ದಿನಾಚರಣೆ ಕುರಿತು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಚಾರಕ್ಕೆ 'ಡಂಗುರ' ಸಾರಬೇಕು ಎಂದ ಅವರು, ದಿನಾಚಣೆ ಕಾರ್ಯಕೃಮ ಯಶಸ್ಸಿಗೆ ಎಕ್ಲಾ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು‌.
ಇನ್ನು ವಿಶೇಷವಾಗಿ ಗ್ರಾಮ ಪಂಚಾಯತಿ ಮತ್ತು ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಬೇಕು. ಎನ್.ಸಿ.ಸಿ, ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ಸಹ ಆಯೋಜಿಸುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಡಿ.ಎಚ್.ಓ. ಡಾ.ಶರಣಸಬಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net