ಹುಮನಾಬಾದ್: ನ್ಯಾ.ನಾಗಮೋಹನ್ ದಾಸ್ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಹಳೆಯ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿ ಒಕ್ಕೂಟದ ಪ್ರಮುಖ ಬಾಬು ಎಸ್.ಟೈಗರ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಳಮೀಸಲಾತಿ ಕುರಿತಂತೆ ನ್ಯಾ.ನಾಗಮೋಹನ್ ದಾಸ್ ಆಯೋಗ ವರದಿ ಒಂದು ಸಮುದಾಯವನ್ನು ಖುಷಿಪಡಿಸಲು ಸರ್ಕಾರ ನೂರಾರು ಜಾತಿಗಳಿಗೆ ಅನ್ಯಾಯ ಮಾಡುತ್ತಿದೆ. ಯಾವುದೇ ನಿಖರ ಹಾಗೂ ವೈಜ್ಞಾನಿಕ ಸಮೀೆ ಆಧಾರದ ಮೇಲೆ ಸಿದ್ಧವಾಗಿಲ್ಲ. ಪರಿಶಿಷ್ಟ ಜಾತಿಯಲ್ಲಿರುವ ಸಮಗ್ರ ಉಪಜಾತಿಗಳ ನಿಖರ ಜನಸಂಖ್ಯೆ, ಪ್ರಸ್ತುತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಸರಿಯಾಗಿ ಅಧ್ಯಯನ ಮಾಡಿಲ್ಲ. ಇದರಿಂದ ಬಲಗೈ ಸಮುದಾಯಗಳಿಗೆ ಹಾಗೂ ಉಪಜಾತಿಗಳಿಗೆ ತೀವ್ರ ಅನ್ಯಾಯವಾಗಿದ್ದು, ನ್ಯಾಯಕ್ಕಾಗಿ ಈ ಹೋರಾಟ ನಡೆಸಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳುವಂತೆ ಮನವಿ ಮಾಡಿದರು.
ಸಮಾಜದ ಮುಖಂಡರಾದ ಲ್ಮಪುತ್ರ ಮಾಳಗೆ, ಶಿವಪುತ್ರ ಮಾಳಗೆ, ರಾಹುಲ್ ಪ್ರಸಾದ್, ರವಿ ಹೊಸಳ್ಳಿ, ಗೌತಮ ಸೇಡೋಳ, ವೈಜಿನಾಥ್ ಸಿಂಧೆ, ರಾಹುಲ್ ಉದ್ಘಾ, ಗಣಪತಿ ಅಷ್ಟೂರೆ, ಮಲ್ಲಿಕಾರ್ಜುನ ಶರ್ಮಾ, ದಿಲೀಪಕುಮಾರ ಮರಪಳ್ಳಿ, ಶಶಿಕಾಂತ ಡಾಂಗೆ, ಸುರೇಶ ಘಾಂಗ್ರೆ, ಅನೀಲ ದೊಡ್ಡಿ ಸೇರಿದಂತೆ ಮತ್ತಿತರರು ಇದ್ದರು.