ತಾಲೂಕಿನ ನಿಡಘಟ್ಟ ಬಳಿ ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ, ಸಚಿವನಾಗಿದ್ದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕದಲೂರು ರಾಮಕೃಷ್ಣ ಅವರು ಪಕ್ಷದ ಸಂಘಟನೆಗೆ ಹೆಚ್ಚು ಹೊತ್ತು ನೀಡಿದ್ದರು. ಇಂತಹವರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನ ಮಾನ ನೀಡುವುದರಿಂದ ಪಕ್ಷಕ್ಕೆ ಹೆಚ್ಚಿನ ಗೌರವ ಸಿಗಲಿದೆ ಎಂದರು.