ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾದಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯಾ ಆಲದಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ, ಕಲಬುರಗಿ ರಂಗಾಯಣ ಆಡಳಿತಾಧಿಕಾರಿ ಸಿದ್ರಾಮ ಶಿಂಧೆ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಕಲಬುರಗಿ ರಂಗಾಯಣ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿದರು.