ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ವತಿಯಿಂದ ನೀಡಲಾಗುವ ‘ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ಪ್ರಶಸ್ತಿ’ಗೆ ಸಾಹಿತಿ ಹಾಗೂ ವಿದ್ವಾಂಸ ಡಾ. ಎಸ್.ಪಿ. ಪದ್ಮಪ್ರಸಾದ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಸ್ಮರಣಿಕೆ ಒಳಗೊಂಡಿದೆ. ಡಾ. ಎಸ್.ಪಿ. ಪದ್ಮಪ್ರಸಾದ್ ಅವರು ಕನ್ನಡ ಜೈನ ಸಾಹಿತ್ಯ ಚರಿತ್ರೆಯನ್ನು ಆರು ಸಂಪುಟಗಳಲ್ಲಿ ಸಂಪಾದಿಸಿ ಪ್ರಕಟಿಸಿದ್ದಾರೆ. ಜೈನ ಜನಪದ ಸಾಹಿತ್ಯ ಕುರಿತು ದೊಡ್ಡ ಮಟ್ಟದ ಸಂಶೋಧನೆ ನಡೆಸಿದ್ದು, ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಆ. 2ರಂದು ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಆಯೋಜಿಸಲಾಗುವ ಸಮಾರಂಭದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.