ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಉಮೇಶ್(80) ನಿಧನ | passes away

ಹಿರಿಯ ಹಾಸ್ಯನಟ ಉಮೇಶ್
ಹಿರಿಯ ಹಾಸ್ಯನಟ ಉಮೇಶ್
Published on
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಉಮೇಶ್ (80) ಇಂದು ಬೆಳಗ್ಗೆ ನಿಧನರಾಗಿದ್ದಾರೆ(passes away). ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಹಿನ್ನೆಲೆ ಶಾಂತ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 
ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲೀವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಕಿಮೊಥೆರಪಿ, ಇಮ್ಯನೋಥೆರಪಿ ಮೂಲಕ ಚೇತರಿಸಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. 
ಆದರೆ ಇಂದು ನಟ ಉಮೇಶ್ ನಿಧನರಾಗಿದ್ದಾರೆ. ಜೆಪಿ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗ್ತಿದೆ. ಮೈಸೂರು ಮೂಲದವರಾದ ಉಮೇಶ್ ಅವರು ಬಹಳ ಚಿಕ್ಕವಯಸ್ಸಿನಲ್ಲೇ ಬಾಲ ನಟರಾಗಿ ರಂಗ ಭೂಮಿ ಪ್ರವೇಶ ಮಾಡಿದ್ದರು ಎನ್ನಲಾಗಿದೆ. 
ಗುಬ್ಬಿ ವೀರಣ್ಣ ಅವರ ಕಂಪನಿಯಲ್ಲಿ ಗುರುತಿಸಿಕೊಂಡಿದ್ದ ಅವರು, 1960ರಲ್ಲಿ ಮಕ್ಕಳ ರಾಜ್ಯ ಎನ್ನುವ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದರು. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಶಿವಾಜಿ ಗಣೇಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. 
ಕನ್ನಡದ  ಗುರು ಶಿಷ್ಯರು, ಕಾಮಮಬಿಲ್ಲು, ನಾಗರಹೊಳೆ, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಮಲಯ ಮಾರುತ..ಸೇರಿದಂತೆ ಇತ್ತೀಚಿನ ಸಿನಿಮಾಗಳಲ್ಲೂ ನಟಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net