ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ; ದೇವಿ ಮಹಾತ್ಮೆ ಯಕ್ಷಗಾನ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
Published on:
Copied
Follow Us
ಬೆಂಗಳೂರು: ವಿದೇಶಾಂಗ ಇಲಾಖೆಯ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಕೋರಮಂಗಲದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರಸಂಗ ಜರುಗಿತು.
ಇಂಡಿಯನ್ ಕೌನ್ಸಿಲ್ ಅರ್ ಕಲ್ಚರಲ್ ರಿಲೇಶನ್ಸ್ (ICCR) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಲಾದರ್ಶಿನಿ ತಂಡದ ಸದಸ್ಯರು ಯಕ್ಷಗಾನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಇಂಡಿಯನ್ ಕೌನ್ಸಿಲ್ ಅರ್ ಕಲ್ಚರಲ್ ರಿಲೇಶನ್ಸ್ ಪ್ರಾದೇಶಿಕ ನಿರ್ದೇಶಕ ಪ್ರದೀಪ್ ಕುಮಾರ್, ಕರ್ನಾಟಕ ಕಲಾದರ್ಶಿನಿ ತಂಡದ ಮುಖ್ಯಸ್ಥ ಶ್ರೀನಿವಾಸ ಸಾಸ್ತಾನ, ಪ್ರಾದೇಶಿಕ ಪಾಸ್‌ಪೋರ್ಟ್ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.