ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ (ಏ.15) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಂಸದ ಪಿ.ಸಿ. ಮೋಹನ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ, ಶಾಸಕ ರಿಜ್ವಾನ್ ಅರ್ಷದ್, ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸರ್ಕಾರದ ಕಾರ್ಯದರ್ಶಿ ಜೆ. ಮಂಜುನಾಥ್ ಮೊದಲಾದವರು ಭಾಗವಹಿಸಲಿದ್ದಾರೆ. ಈ ಯೋಜನೆಯಡಿ 100 ಪುಸ್ತಕಗಳ ಪ್ರಕಟಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಾಧಿಕಾರದ ಸದಸ್ಯರೂ ಆಗಿರುವ ವಿಮರ್ಶಕ ರವಿಕುಮಾರ್ ನೀಹ ಯೋಜನೆಯ ನಿರ್ದೇಶಕರಾಗಿದ್ದಾರೆ. ಸಾಹಿತಿ ಬೊಳುವಾರು ಮಹಮದ್ ಕುಂಇ ಅವರು ಮುಖ್ಯ ಸಂಪಾದಕರಾಗಿದ್ದು, ಏಳು ವಿದ್ವಾಂಸರ ಸಂಪಾದಕೀಯ ತಂಡವು ಯೋಜನೆಯನ್ನು ಕಾರ್ಯಗತಗೊಳಿಸಲು ಶ್ರಮಿಸಿದೆ.