ನೂತನ ಅಧ್ಯಕ್ಷ ಕಾಂತರಾಜು ಮಾತನಾಡಿ, ನಮ್ಮೆಲ್ಲ ಸದಸ್ಯರ ಸಹಕಾರದೊಂದಿಗೆ ಎಂ.ಎನ್.ಕೋಟೆ ಗ್ರಾಪಂ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುತ್ತೇನೆ. ರಸ್ತೆ, ಬೀದಿದೀಪ, ಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಲು ಬದನಾಗಿದ್ದೇನೆ ಎಂದರು.