ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಐದು ಕೋಟಿ ರೂ. ಘಟಕ ವೆಚ್ಚದಲ್ಲಿ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡಗಳ ನಿರ್ಮಾಣ ಹಾಗೂ ಬೆಂಗಳೂರು, ಮೈಸೂರು ನಗರದ ದೋಬಿಘಾಟ್‌ಗಳಲ್ಲಿ ಮಡಿವಾಳ ಸಮಾಜದವರಿಗೆ ತಲಾ 75 ಲಕ್ಷ ರೂ. ಘಟಕ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳ ಸ್ಥಾಪಿಸಲಾಗುವುದು ಎಂದರು.