ರಾಜ್ಯ ಬಜೆಟ್​ 2026: ಮದ್ಯ ಪ್ರಿಯರಿಗೆ ಬಜೆಟ್​ನಲ್ಲಿ ಶಾಕ್​!? ಏಕರೂಪ ಅಬಕಾರಿ ಸುಂಕ ಹೆಚ್ಚಳಕ್ಕೆ ತೀರ್ಮಾನ

ರಾಜ್ಯ ಬಜೆಟ್​ 2026
ರಾಜ್ಯ ಬಜೆಟ್​ 2026
Published on

ಪ್ರಮುಖ ಮುಖ್ಯಾಂಶಗಳು

  • ಇಂದು 2026-27ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ
  • ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 17ನೇ ಬಜೆಟ್​
  • ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧಾರ
Karnataka Budget 2026: ಇಂದು (ಮಾ.06) ರಾಜ್ಯ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ ಆಯವ್ಯಯ (ಬಜೆಟ್) ಮಂಡನೆಯಾಗಿದ್ದು, ಇದು ಸಿಎಂ ಅವರ ದಾಖಲೆಯ 17ನೇ ಬಜೆಟ್​ ಎಂಬುದು ಮತ್ತೊಂದು ವಿಶೇಷ. ಈ ಬಾರಿಯ ಬಜೆಟ್​ ಒಟ್ಟು ಗಾತ್ರ ಬರೋಬ್ಬರಿ 4,48,004 ಕೋಟಿ ರೂ. ಆಗಿದೆ. 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಬಜೆಟ್ ಗಾತ್ರದಲ್ಲಿ ಗಣನೀಯ ಏರಿಕೆಯಾಗಿದೆ.
ಹಲವು ಕ್ಷೇತ್ರಗಳು ಮತ್ತು ವಿಭಾಗಗಳಿಗೆ ಹೆಚ್ಚುವರಿ ಕೊಡುಗೆಗಳನ್ನು ಘೋಷಿಸಿರುವ ರಾಜ್ಯ ಸರ್ಕಾರ, ಇದೀಗ ಅಬಕಾರಿ ಆದಾಯ ತೆರಿಗೆ ಹೆಚ್ಚಳಕ್ಕೆ ಮುಕ್ತ ಅವಕಾಶ ನೀಡುವ ಮೂಲಕ ರಾಜ್ಯ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್​ ತಂದಿಟ್ಟಿದೆ. ಎಣ್ಣೆಯ ಅಂಶ ಆಧರಿಸಿ, ತೆರಿಗೆ ವಿಧಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಮದ್ಯದ ದರದಲ್ಲಿ ಇನ್ನಷ್ಟು ಹೆಚ್ಚಳ ಆಗುವ ಎಲ್ಲ ಸಾಧ್ಯತೆಗಳಿವೆ.   
ಅಬಕಾರಿ ಆದಾಯ ತೆರಿಗೆ ಹೆಚ್ಚಳಕ್ಕೆ ಮುಕ್ತ ಅವಕಾಶ ನೀಡಿದ್ದು, ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಏಕರೂಪ ಅಬಕಾರಿ ಸುಂಕ ಹೆಚ್ಚಳಕ್ಕೆ ಮಾತ್ರ ಬಜೆಟ್​ನಲ್ಲಿ ತೀರ್ಮಾನಿಸಲಾಗಿದೆ. ಎಕ್ಸ್ ಫ್ಯಾಕ್ಟರಿ ದರ ಪಟ್ಟಿ ಆಧಾರದ ಮೇಲೆ ತೆರಿಗೆಯನ್ನು ಹಂತ ಹಂತವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. 

ಸಿಎಂ ದಾಖಲೆ ಬಜೆಟ್​

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ. ಸುಮಾರು 4.2 ರಿಂದ 4.5 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net