ಮಂತ್ರಿಮಂಡಲದಲ್ಲಿ ಅವಕಾಶ ಸಿಗದಿದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧ: ಡೆಪ್ಯೂಟಿ ಸ್ಪೀಕರ್ ಪೊನ್ನಣ್ಣ ಸ್ಪಷ್ಟನೆ! Deputy Speaker A S Ponnanna

ಮಂತ್ರಿಮಂಡಲದಲ್ಲಿ ಅವಕಾಶ ಸಿಗದಿದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧ: ಡೆಪ್ಯೂಟಿ ಸ್ಪೀಕರ್ ಪೊನ್ನಣ್ಣ ಸ್ಪಷ್ಟನೆ! Deputy Speaker A S Ponnanna
ಮಂತ್ರಿಮಂಡಲದಲ್ಲಿ ಅವಕಾಶ ಸಿಗದಿದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧ: ಡೆಪ್ಯೂಟಿ ಸ್ಪೀಕರ್ ಪೊನ್ನಣ್ಣ ಸ್ಪಷ್ಟನೆ! Deputy Speaker A S Ponnanna
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಸ್ಥಾನ ಸಿಗದಿದ್ದರೂ ಪಕ್ಷದ ತೀರ್ಮಾನಕ್ಕೆ ಸಂಪೂರ್ಣ ಬದ್ಧನಾಗಿದ್ದೇನೆ ಎಂದು ಡೆಪ್ಯೂಟಿ ಸ್ಪೀಕರ್ ಪೊನ್ನಣ್ಣ ಸ್ಪಷ್ಟನೆ
  • ಮಂತ್ರಿಸ್ಥಾನ ಸಿಗದಿದ್ದರೂ ಬೇಸರವಿಲ್ಲ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗುತ್ತೇನೆ ಎಂದ ಎ ಎಸ್ ಪೊನ್ನಣ್ಣ
  • ನನ್ನ ಹೆಸರನ್ನು ಸಚಿವ ಸ್ಥಾನಕ್ಕೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು ಎಂಬ ಪೂರ್ಣ ನಂಬಿಕೆಯಿದೆ ಎಂದ ಪೊನ್ನಣ್ಣ
  • ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ವಾದಿಸಲು ಅವಕಾಶವಿದ್ದರೂ ಪಕ್ಷದ ಹಿತವೇ ಮುಖ್ಯ ಎಂದ ಡೆಪ್ಯೂಟಿ ಸ್ಪೀಕರ್
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದಿರುವ ಬಗ್ಗೆ ನನಗೇನು ಬೇಸರವಿಲ್ಲ, ಪಕ್ಷದ ತೀರ್ಮಾನಕ್ಕೆ ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದು ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಎ.ಎಸ್​. ಪೊನ್ನಣ್ಣ ( Deputy Speaker A S Ponnanna ) ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಪೊನ್ನಣ್ಣ, ನಾನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರನಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದು, ನಿಸ್ವಾರ್ಥವಾಗಿ ಹಲವು ಶಾಸಕರನ್ನು ಕಾನೂನು ತೊಡಕುಗಳಿಂದ ಪಾರು ಮಾಡಿದ್ದರೂ ಸಹ ಮಂತ್ರಿಮಂಡಲದಲ್ಲಿ ಅವಕಾಶ ಸಿಗದಿರುವುದು ಅಚ್ಚರಿ ತಂದಿದೆ ಎಂದು ಇದೇ ಸಮಯದಲ್ಲಿ ಮುಕ್ತವಾಗಿ ಹೇಳಿಕೊಂಡಿದ್ದಾರೆ.
ಪಕ್ಷವು ತನ್ನದೇ ಆದ ರಾಜಕೀಯ ಮಾನದಂಡಗಳು ಹಾಗೂ ಲೆಕ್ಕಾಚಾರಗಳ ಆಧಾರದ ಮೇಲೆ ತೀರ್ಮಾನ ಕೈಗೊಂಡಿರುತ್ತದೆ ಎಂದು ಸಮರ್ಥಿಸಿಕೊಂಡಿರುವ ಅವರು, ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ವಾದಿಸಲು ಅವಕಾಶವಿದ್ದರೂ ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗುವುದಾಗಿ ತಿಳಿಸಿದ್ದಾರೆ. ತಮಗೆ ತೀವ್ರ ಬೇಸರವಾಗಿದ್ದರೂ ಆ ನೋವನ್ನು ನುಂಗಿಕೊಂಡು, ಜೀರ್ಣಿಸಿಕೊಂಡು ಮುಂದೆ ಸಾಗಬೇಕಾಗುತ್ತದೆ ಎಂದು ಅವರು ಭಾವುಕರಾಗಿ ನುಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸ್ಥಾನಕ್ಕಾಗಿ ನನ್ನ ಹೆಸರನ್ನು ಖಂಡಿತವಾಗಿ ಶಿಫಾರಸು ಮಾಡಿದ್ದರು ಎಂಬ ನಂಬಿಕೆಯಿದೆ ನನಗಿದೆ ಎಂದು ಸ್ಪಷ್ಟಪಡಿಸಿದ ಪೊನ್ನಣ್ಣ, ಸಿಎಂ ಡಿಕೆಶಿ ಮತ್ತು ಹಿರಿಯ ನಾಯಕರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ ಎಂದರು. ಅಲ್ಲದೆ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಶಾಸಕರು ಮುಖ್ಯಮಂತ್ರಿಗಳ ಪರವಾಗಿ ಗಟ್ಟಿಯಾಗಿ ನಿಲ್ಲುವ ಅನಿವಾರ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಪಕ್ಷಗಳು ಸರ್ಕಾರಕ್ಕೆ ಮುಜುಗರ ತರಲು ನಿರಂತರ ಪ್ರಯತ್ನಿಸುತ್ತಿದ್ದು, ಇಂತಹ ಸವಾಲುಗಳನ್ನು ಎದುರಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದ್ದಾರೆ. ತಮಗೆ ಸಿಕ್ಕಿರುವ ಡೆಪ್ಯೂಟಿ ಸ್ಪೀಕರ್ ಹುದ್ದೆಯನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ತಿಳಿಸಿದ ಪೊನ್ನಣ್ಣ, ದೇಶಾದ್ಯಂತ ಬದಲಾವಣೆಯ ಗಾಳಿ ಬೀಸುತ್ತಿದ್ದು, ಎಲ್ಲ ಹಿರಿಯ ನಾಯಕರು ಒಟ್ಟಾಗಿ ಪಕ್ಷದ ಸಂಘಟನೆಗಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net