ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರವು ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ವಿನಾಯಿತಿ ನೀಡಿರುವುದರಿಂದ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.